2 Chronicles 7:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಇಸ್ರೇಲರನ್ನು ಅವರಿಗೆ ಕೊಟ್ಟಿರುವ ದೇಶದಿಂದ ತೆಗೆದುಹಾಕುವೆನು; ನನ್ನ ಹೆಸರಿಗೋಸ್ಕರ ಪವಿತ್ರ ಮಾಡಿದ ಈ ದೇವಾಲಯವನ್ನು ತೊರೆದುಬಿಡುವೆನು. ಈ ದೇವಾಲಯದ ಬಗ್ಗೆ ಲೋಕದ ಜನರು ಗೇಲಿಮಾಡುವಂತೆ ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು.
Kannada BSI Bible 2016
ನಾನು ಅವರಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ನಿರ್ಮೂಲ ಮಾಡುವೆನು. ಇದಲ್ಲದೆ ನನ್ನ ಹೆಸರಿಗೋಸ್ಕರ ನಾನು ಪರಿಶುದ್ಧ ಮಾಡಿದ ಈ ಆಲ ಯವನ್ನು ನನ್ನ ಸಮ್ಮುಖದಿಂದ ತಳ್ಳಿ ಅದನ್ನು ಸಮಸ್ತ ಜನಗಳಲ್ಲಿ ಗಾದೆಯಾಗಿಯೂ ಹಾಸ್ಯವಾಗಿಯೂ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳಿಗೆ ಕೈಮುಗಿಯುವದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಕಿತ್ತುಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿಬಿಟ್ಟು ಎಲ್ಲಾ ಜನಾಂಗಗಳವರು ಗಾದೆಗಳನ್ನು ಕಲ್ಪಿಸುವದಕ್ಕೂ ನಿಂದಿಸುವದಕ್ಕೂ ಅದು ಆಸ್ಪದವಾಗುವಂತೆ ಮಾಡುವೆನು.
Kannada Bible (KNCL) BSI 2016
ನಾನು ಇಸ್ರಯೇಲರಿಗೆ ಕೊಟ್ಟ ನನ್ನ ನಾಡಿನಿಂದ ನಿಮ್ಮನ್ನು ಕಿತ್ತುಹಾಕುವೆನು; ನನ್ನ ಹೆಸರಿಗೆ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿಬಿಡುವೆನು; ಎಲ್ಲ ಜನಾಂಗಗಳವರು ಪರಿಹಾಸ್ಯದಿಂದ ಲಾವಣಿ ಕಟ್ಟುವುದಕ್ಕೂ ನಿಂದಿಸುವುದಕ್ಕೂ ಇದು ಆಸ್ಪದವಾಗುವಂತೆ ಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ಇಸ್ರಾಯೇಲಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ಕಿತ್ತುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಅದನ್ನು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಆಸ್ಪದವಾಗುವಂತೆ ಮಾಡುವೆನು.