2 Chronicles 7:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅತ್ಯಂತ ಪ್ರಸಿದ್ಧಿಹೊಂದಿದ ಈ ದೇವಾಲಯವನ್ನು ನೋಡುವ ಪ್ರತಿಯೊಬ್ಬನು, ‘ದೇವರು ಈ ದೇಶಕ್ಕೆ ಮತ್ತು ಈ ಆಲಯಕ್ಕೆ ಹೀಗೇಕೆ ಮಾಡಿದನು?’ ಎಂದು ಅಚ್ಚರಿಪಡುವಂತೆ ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉನ್ನತವಾದ ಮಂದಿರದ ಈ ಮಾರ್ಗವಾಗಿ ಹೋಗುವವರು ಅದನ್ನು ನೋಡಿ ಬೆರಗಾಗಿ, ‘ಯೆಹೋವನು ಈ ದೇಶವನ್ನೂ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.
Kannada BSI Bible 2016
ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉನ್ನತವಾದ ಈ ಮಂದಿರದ ಮಾರ್ಗವಾಗಿ ಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ - ಯೆಹೋವನು ಈ ದೇಶವನ್ನೂ ಆಲಯವನ್ನೂ ಹೀಗೇಕೆ ಮಾಡಿದನು ಎಂದು ಕೇಳುವರು.
Kannada Bible (KNCL) BSI 2016
ಉನ್ನತವಾದ ಈ ಮಂದಿರದ ಮಾರ್ಗವಾಗಿ ಹೋಗುವವರು ಇದನ್ನು ನೋಡಿ ವಿಸ್ಮಿತರಾಗಿ, ‘ಸರ್ವೇಶ್ವರ ಈ ನಾಡನ್ನೂ ಈ ಆಲಯವನ್ನೂ ಹೀಗೇಕೆ ಮಾಡಿಬಿಟ್ಟರು?’ ಎಂದು ಕೇಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಉನ್ನತವಾಗಿರುವ ಈ ಆಲಯದ ಮಾರ್ಗವಾಗಿ ಹೋಗುವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು, ‘ಯೆಹೋವ ದೇವರು, ಈ ದೇಶಕ್ಕೂ, ಈ ಆಲಯಕ್ಕೂ ಹೀಗೆ ಏಕೆ ಮಾಡಿದರು?’ ಎಂದು ಕೇಳುವರು.