2 Chronicles 7:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಜನರು, ‘ಯಾಕೆಂದರೆ ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ಆತನು ಅವರನ್ನು ಈಜಿಪ್ಟಿನಿಂದ ಬಿಡಿಸಿ ಹೊರತಂದನು. ಆದರೆ ಅವರು ಬೇರೆ ದೇವರುಗಳನ್ನು ಪೂಜಿಸಿ ಅವುಗಳ ಸೇವೆಮಾಡಿದರು. ಆದ್ದರಿಂದಲೇ ಭಯಂಕರವಾದ ಈ ಸಂಕಟಗಳನ್ನೆಲ್ಲ ದೇವರು ಇಸ್ರೇಲರಿಗೆ ಬರಮಾಡಿದನು’ ಎಂದು ಹೇಳುವರು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರಿಗೆ, ‘ಈ ದೇಶದವರು ತಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿ, ಅನ್ಯ ದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಆತನು ಈ ಎಲ್ಲಾ ಆಪತ್ತನ್ನು ಅವರಿಗೆ ಬರಮಾಡಿದ್ದಾನೆ.’” ಎಂದು ಉತ್ತರ ಕೊಡುವರು ಎಂದನು.
Kannada BSI Bible 2016
ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವರಿಗೆ - ಈ ದೇಶದವರು ತಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದಲೇ ಆತನು ಈ ಎಲ್ಲಾ ಆಪತ್ತನ್ನು ಅವರಿಗೆ ಬರಮಾಡಿದ್ದಾನೆ ಎಂಬ ಉತ್ತರ ಸಿಕ್ಕುವದು ಅಂದನು.
Kannada Bible (KNCL) BSI 2016
ಆಗ ಅವರಿಗೆ, ‘ಈ ನಾಡಿನವರು ತಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿದ ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಭಿಸಿ, ಅವುಗಳಿಗೆ ಅಡ್ಡಬಿದ್ದು ಸೇವೆಸಲ್ಲಿಸಿದ್ದರಿಂದಲೇ ಅವರು ಈ ಎಲ್ಲಾ ಆಪತ್ತುಗಳನ್ನು ಅವರಿಗೆ ಬರಮಾಡಿ ಇದ್ದಾರೆ,’ ಎಂಬ ಉತ್ತರ ಸಿಕ್ಕುವುದು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಜನರು, ‘ತಮ್ಮ ತಂದೆಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು, ಅನ್ಯದೇವರುಗಳನ್ನು ಹಿಂಬಾಲಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ, ಅವರು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಾರೆಂದು ಹೇಳುವರು,’ ” ಎಂದರು.