2 Chronicles 7:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೊಲೊಮೋನ ಅರಸನು ಇಪ್ಪತ್ತೆರಡು ಸಾವಿರ ಹೋರಿಗಳನ್ನೂ ಒಂದು ಲಕ್ಷ ಇಪ್ಪತ್ತು ಸಾವಿರ ಕುರಿಗಳನ್ನೂ ಯಜ್ಞವಾಗಿ ಸಮರ್ಪಿಸಿದನು. ಅರಸನೂ ಎಲ್ಲಾ ಜನರೂ ದೇವಾಲಯವನ್ನು ಆರಾಧನೆಗಾಗಿ ಪ್ರತಿಷ್ಠಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸಿದನು. ಈ ಪ್ರಕಾರ ಅರಸನು ಮತ್ತು ಎಲ್ಲಾ ಇಸ್ರಾಯೇಲರು ಯೆಹೋವನ ದೇವಾಲಯವನ್ನು ಪ್ರತಿಷ್ಠೆ ಮಾಡಿದರು.
Kannada BSI Bible 2016
ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ, ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲ್ಯರೂ ದೇವಾಲಯವನ್ನು ಪ್ರತಿಷ್ಠಿಸಿದರು.
Kannada Bible (KNCL) BSI 2016
ಅರಸ ಸೊಲೊಮೋನನು ಬಲಿಯಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ, ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಇಸ್ರಯೇಲರೆಲ್ಲರೂ ದೇವಾಲಯವನ್ನು ಪ್ರತಿಷ್ಠಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಸೊಲೊಮೋನನು 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಬಲಿಯಾಗಿ ಅರ್ಪಿಸಿದನು. ಹೀಗೆಯೇ ಅರಸನೂ, ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು.