2 Chronicles 7:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕರು ತಮ್ಮ ಕೆಲಸಗಳನ್ನು ಮಾಡಲು ತಮ್ಮ ಸ್ಥಳಗಳಲ್ಲಿ ತಯಾರಾಗಿ ನಿಂತಿದ್ದರು. ಲೇವಿಕುಲದ ಗಾಯಕರು ತಮ್ಮ ವಾದ್ಯಗಳೊಂದಿಗೆ ದೇವರನ್ನು ಸ್ತುತಿಸಲು ನಿಂತಿದ್ದರು. ಆ ವಾದ್ಯಗಳನ್ನು ಅರಸನಾದ ದಾವೀದನು ದೇವರನ್ನು ಸ್ತುತಿಸುವದಕ್ಕೋಸ್ಕರ ತಯಾರಿಸಿದ್ದನು. ಯಾಜಕರೂ ಲೇವಿಯರೂ, ‘ದೇವರಾದ ಯೆಹೋವನ ಕೃಪೆಯು ನಿರಂತರವಾದದ್ದು’ ಎಂದು ಹೇಳುತ್ತಿದ್ದರು. ಯಾಜಕರು ಲೇವಿಯರಿಗೆ ಎದುರಾಗಿ ನಿಂತುಕೊಂಡು ತುತ್ತೂರಿಯನ್ನು ಊದಿದರು. ಇಸ್ರೇಲರೆಲ್ಲರೂ ನಿಂತುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಯೊಬ್ಬ ಯಾಜಕನು ತನ್ನ ಸೇವೆಗನುಸಾರವಾಗಿ ನಿಂತರು. ಲೇವಿಯರೂ ಮತ್ತು ದಾವೀದ ರಾಜನು ಯೆಹೋವನ ಗಾಯನ ಸೇವೆಗೋಸ್ಕರ ಮಾಡಿಸಿದ ವಾದ್ಯಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು, ದೇವಾರಾಧನೆ ಮಾಡುತ್ತಾ, “ಆತನ ಕೃಪೆಯು ಶಾಶ್ವತವಾದದ್ದು” ಎಂಬುದಾಗಿ ಸ್ತುತಿ ಸಲ್ಲಿಸಿದರು. ಎಲ್ಲಾ ಯಾಜಕರು ಅವರ ಮುಂದೆ ತುತ್ತೂರಿಗಳನ್ನು ಊದಿದರು. ಸಮಸ್ತ ಇಸ್ರಾಯೇಲ್ಯರು ಎದ್ದು ನಿಂತಿದ್ದರು.
Kannada BSI Bible 2016
ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ದಾವೀದನು ಯೆಹೋವನ ಗಾಯನಸೇವೆಗೋಸ್ಕರ ಮಾಡಿಸಿದ ವಾದ್ಯಗಳು ಈ ಲೇವಿಯರ ಕೈಯಲ್ಲಿದ್ದವು. ಇವರು ರಾಜ ಸೇವೆಯಲ್ಲಿದ್ದುಕೊಂಡು ದೇವಾರಾಧನೆ ನಡಿಸುತ್ತಾ - ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಮರ್ಪಿಸಿರಿ, ಆತನ ಕೃಪೆಯು ಶಾಶ್ವತವಾಗಿದೆ ಎಂಬದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಇವರ ಎದುರಾಗಿ ನಿಂತು ತುತೂರಿಯೂದುತ್ತಿದ್ದರು. ಇಸ್ರಾಯೇಲ್ಯರೆಲ್ಲರೂ ನಿಂತಿದ್ದರು.
Kannada Bible (KNCL) BSI 2016
ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ದಾವೀದನು ಸರ್ವೇಶ್ವರನ ಗಾಯನಸೇವೆಗಾಗಿ ಮಾಡಿಸಿದ ವಾದ್ಯಗಳು ಈ ಲೇವಿಯರ ಕೈಯಲ್ಲಿ ಇದ್ದವು. ಇವರು ರಾಜಸೇವೆಯಲ್ಲಿದ್ದುಕೊಂಡು ದೇವಾರಾಧನೆ ನಡೆಸುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಯನ್ನು ಸಮರ್ಪಿಸಿರಿ; ಅವರ ಅಚಲಪ್ರೀತಿ ಶಾಶ್ವತ” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಇವರ ಎದುರಾಗಿ ನಿಂತು ತುತೂರಿಯೂದುತ್ತಿದ್ದರು. ಇಸ್ರಯೇಲರೆಲ್ಲರೂ ನಿಂತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಂತರು. ಹಾಗೆಯೇ ಲೇವಿಯರು ಯೆಹೋವ ದೇವರ ಗೀತವಾದ್ಯಗಳನ್ನು ಹಿಡಿದುಕೊಂಡು ನಿಂತರು. ಅರಸನಾದ ದಾವೀದನು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಇವುಗಳನ್ನು ಮಾಡಿಸಿದ್ದನು. “ಯೆಹೋವ ದೇವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಲೇವಿಯರ ಮುಂದೆ ನಿಂತು ತುತೂರಿಗಳನ್ನು ಊದುತ್ತಿದ್ದರು. ಸಮಸ್ತ ಇಸ್ರಾಯೇಲರೂ ನಿಂತಿದ್ದರು.