2 Chronicles 7:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೊಲೊಮೋನನೂ ಎಲ್ಲಾ ಇಸ್ರೇಲರೂ ಏಳು ದಿನಗಳ ತನಕ ಪರ್ಣಶಾಲೆಗಳ ಹಬ್ಬವನ್ನು ಆಚರಿಸಿದರು. ಸೊಲೊಮೋನನೊಂದಿಗೆ ಬಹುದೊಡ್ಡ ಇಸ್ರೇಲರ ಸಮೂಹವು ನೆರೆದು ಬಂದಿತ್ತು. ಹಮಾತಿನಿಂದ ಹಿಡಿದು ಈಜಿಪ್ಟಿನ ನದಿಯ ತನಕ ವಾಸಿಸುವವರೆಲ್ಲರೂ ಜೆರುಸಲೇಮಿಗೆ ಬಂದಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ, ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಅಲ್ಲಿ ಏಳು ದಿನಗಳವರೆಗೂ ಪರ್ಣಶಾಲೆಗಳ ಜಾತ್ರೆ ಆಚರಿಸಿದರು.
Kannada BSI Bible 2016
ಅದೇ ಕಾಲ ದಲ್ಲಿ ಸೊಲೊಮೋನನು ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತ ನದಿಯ ವರೆಗೆ ಇರುವ ಮಹಾ ಸಭೆಯಾದ ಸಮಸ್ತ ಇಸ್ರಾಯೇಲ್ಯರು ಏಳು ದಿವಸ ಹಬ್ಬವನ್ನು ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದವರೆಗಿರುವ ಪ್ರಾಂತಗಳಿಂದ ಮಹಾಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಅದೇ ಕಾಲದಲ್ಲಿ ಏಳು ದಿನಗಳವರೆಗೂ [ಪರ್ಣಶಾಲೆಗಳ] ಜಾತ್ರೆ ನಡಿಸಿದರು.
Kannada Bible (KNCL) BSI 2016
ಈ ಪ್ರಕಾರ ಸೊಲೊಮೋನನು ಮತ್ತು ಹಮಾತಿನ ದಾರಿಯಿಂದ ಈಜಿಪ್ಟಿನ ಹಳ್ಳದವರೆಗಿರುವ ಪ್ರಾಂತ್ಯಗಳಿಂದ ಮಹಾಸಮೂಹವಾಗಿ ಕೂಡಿಬಂದಿದ್ದ ಇಸ್ರಯೇಲರೆಲ್ಲರು ಅದೇ ಸಮಯದಲ್ಲಿ ಏಳು ದಿನಗಳವರೆಗೂ ಜಾತ್ರೆ ನಡೆಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ಕಾಲದಲ್ಲಿ ಸೊಲೊಮೋನನೂ, ಅವನ ಸಂಗಡ ಲೆಬೊ ಹಮಾತಿನ ಪ್ರದೇಶ ಮೊದಲುಗೊಂಡು ಈಜಿಪ್ಟಿನ ನದಿಯವರೆಗೆ ಇರುವ ಮಹಾ ಜನಾಂಗವಾಗಿ ಕೂಡಿಬಂದಿದ್ದ ಸಮಸ್ತ ಇಸ್ರಾಯೇಲರೂ ಅವನ ಸಂಗಡ ಏಳು ದಿವಸ ಹಬ್ಬವನ್ನು ಮಾಡಿದರು.