2 Chronicles 8:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೊಲೊಮೋನನು ದಾವೀದ ನಗರದಲ್ಲಿದ್ದ ಫರೋಹನ ಕುಮಾರ್ತೆಯನ್ನು ಆಕೆಗಾಗಿ ಕಟ್ಟಿದ ಅರಮನೆಗೆ ಕರೆಸಿದನು. “ನನ್ನ ಹೆಂಡತಿಯು ದಾವೀದನ ಮನೆಯಲ್ಲಿ ವಾಸಿಸಬಾರದು. ಯಾಕೆಂದರೆ ದೇವರ ಒಡಂಬಡಿಕೆಯ ಪೆಟ್ಟಿಗೆ ಇರುವ ಸ್ಥಳಗಳು ಪರಿಶುದ್ಧವಾಗಿವೆ” ಎಂದು ಸೊಲೊಮೋನನು ಅಂದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಲೊಮೋನನು, “ಯಾವ ಯಾವ ಸ್ಥಳಗಳಲ್ಲಿ ಯೆಹೋವನ ಮಂಜೂಷವಿತ್ತೋ ಅವೆಲ್ಲವೂ ಪವಿತ್ರಸ್ಥಾನಗಳು. ಆದುದರಿಂದ ಇಸ್ರಾಯೇಲರ ಅರಸನಾದ ದಾವೀದನ ಮನೆಯಲ್ಲಿ ಫರೋಹನ ಪುತ್ರಿಯಾದ ನನ್ನ ಹೆಂಡತಿಯು ವಾಸಿಸಬಾರದು” ಅಂದುಕೊಂಡು ಆಕೆಯನ್ನು ದಾವೀದನಗರದಲ್ಲಿರಿಸದೆ, ತಾನು ಆಕೆಗಾಗಿ ಕಟ್ಟಿಸಿದ ಮಂದಿರಕ್ಕೆ ಕರೆದುಕೊಂಡು ಬಂದನು.
Kannada BSI Bible 2016
ಸೊಲೊಮೋನನು ಫರೋಹನ ಕುಮಾರ್ತೆ ಯನ್ನು ದಾವೀದನ ಪಟ್ಟಣದಿಂದ ತಾನು ಅವಳಿ ಗೋಸ್ಕರ ಕಟ್ಟಿಸಿದ ಮನೆಗೆ ಬರಮಾಡಿದನು. ಕರ್ತನ ಒಡಂಬಡಿಕೆಯ ಮಂಜೂಷವು ಬಂದ ಸ್ಥಳಗಳು ಪರಿಶುದ್ಧವಾಗಿರುವದರಿಂದ ನನ್ನ ಹೆಂಡತಿಯು ಇಸ್ರಾ ಯೇಲಿನ ಅರಸನಾದ ದಾವೀದನ ಮನೆಯಲ್ಲಿ ವಾಸ ವಾಗಿರಕೂಡದೆಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊಲೊಮೋನನು - ಯಾವ ಯಾವ ಸ್ಥಳಗಳಲ್ಲಿ ಯೆಹೋವನ ಮಂಜೂಷವಿತ್ತೋ ಅವು ಪವಿತ್ರಸ್ಥಾನಗಳೇ; ಆದದರಿಂದ ಇಸ್ರಾಯೇಲ್ಯರ ಅರಸನಾದ ದಾವೀದನ ಮನೆಯಲ್ಲಿ ಫರೋಹನ ಮಗಳಾದ ನನ್ನ ಹೆಂಡತಿಯು ವಾಸಿಸಬಾರದು ಅಂದುಕೊಂಡು ಆಕೆಯನ್ನು ದಾವೀದನಗರದಿಂದ ತಾನು ಆಕೆಗೋಸ್ಕರ ಕಟ್ಟಿಸಿದ ಮಂದಿರಕ್ಕೆ ಕರಕೊಂಡು ಬಂದನು.
Kannada Bible (KNCL) BSI 2016
“ಯಾವ ಯಾವ ಸ್ಥಳಗಳಲ್ಲಿ ಸರ್ವೇಶ್ವರನ ಮಂಜೂಷವಿತ್ತೋ ಅವು ಪವಿತ್ರಸ್ಥಾನಗಳು; ಆದುದರಿಂದ ಇಸ್ರಯೇಲರ ಅರಸನಾಗಿದ್ದ ದಾವೀದನ ಮನೆ ಪವಿತ್ರವಾದುದು; ಅಲ್ಲಿ ಫರೋಹನ ಮಗಳಾದ ನನ್ನ ಹೆಂಡತಿ ವಾಸಿಸಬಾರದು,” ಎಂದುಕೊಂಡು ಸೊಲೊಮೋನನು ಆಕೆಯನ್ನು ದಾವೀದನಗರದಿಂದಾಚೆ ಆಕೆಗಾಗಿಯೇ ತಾನು ಕಟ್ಟಿಸಿದ್ದ ಮಂದಿರದಲ್ಲಿ ಇರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೊಲೊಮೋನನು, “ಯೆಹೋವ ದೇವರ ಒಡಂಬಡಿಕೆಯ ಮಂಜೂಷವಿದ್ದ ಸ್ಥಳಗಳು ಪರಿಶುದ್ಧವಾಗಿರುವುದರಿಂದ, ನನ್ನ ಹೆಂಡತಿಯು ಇಸ್ರಾಯೇಲಿನ ಅರಸನಾದ ದಾವೀದನ ಅರಮನೆಯಲ್ಲಿ ವಾಸವಾಗಿರಕೂಡದು,” ಎಂದು ಹೇಳಿ ಸೊಲೊಮೋನನು ಫರೋಹನ ಮಗಳನ್ನು ದಾವೀದನ ಪಟ್ಟಣದಲ್ಲಿರಿಸದೆ ತಾನು ಆಕೆಗೋಸ್ಕರ ಕಟ್ಟಿಸಿದ ಅರಮನೆಯಲ್ಲಿ ಅವಳನ್ನು ಇರಿಸಿದನು.