2 Chronicles 8:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯ ಅಪ್ಪಣೆಯ ಪ್ರಕಾರ ಪ್ರತಿನಿತ್ಯವೂ ಸಬ್ಬತ್‌ದಿನಗಳಲ್ಲಿಯೂ ಅಮಾವಾಸ್ಯೆಯ ದಿನಗಳಲ್ಲಿಯೂ ವರ್ಷದ ಮೂರು ಹಬ್ಬದ ದಿನಗಳಲ್ಲಿಯೂ (ಹುಳಿಯಿಲ್ಲದ ರೊಟ್ಟಿಯ ಹಬ್ಬ, ವಾರಗಳ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬ) ಆಯಾ ದಿನಗಳಲ್ಲಿ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅಮಾವಾಸ್ಯೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಆಯಾ ದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.
Kannada BSI Bible 2016
ದಿನಂಪ್ರತಿಯಲ್ಲಿ ಮೋಶೆಯ ಆಜ್ಞೆ ಪ್ರಕಾರ ಸಬ್ಬ ತ್ತುಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವರುಷದಲ್ಲಿ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿ ಇಲ್ಲದ ರೊಟ್ಟಿಯ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಪರ್ಣಶಾಲೆಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಯಜ್ಞವೇದಿಯ ಮೇಲೆ ಮೋಶೆಯ ಆಜ್ಞೆಯಂತೆ ಸಬ್ಬತ್ ದಿವಸ, ಅಮಾವಾಸ್ಯೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆ, ಪಂಚಾಶತ್ತಮದಿನದ ಜಾತ್ರೆ, ಪರ್ಣಶಾಲೆಗಳ ಜಾತ್ರೆ ಎಂಬೀ ಮೂರು ವಾರ್ಷಿಕಜಾತ್ರೆಗಳಲ್ಲಿಯೂ ಆಯಾ ದಿವಸಗಳಿಗೆ ನೇಮಕವಾದ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಿದ್ದನು.
Kannada Bible (KNCL) BSI 2016
ಮೋಶೆಯ ಆಜ್ಞೆಯಂತೆ, ಸಬ್ಬತ್‍ದಿನ, ಅಮಾವಾಸ್ಯೆ, ಇವುಗಳಲ್ಲೂ ಹುಳಿರಹಿತ ರೊಟ್ಟಿಗಳ ಜಾತ್ರೆ, ಪಂಚಾಶತ್ತಮ ದಿನದ ಜಾತ್ರೆ, ಪರ್ಣಕುಟೀರಗಳ ಜಾತ್ರೆ ಎಂಬೀ ಮೂರು ವಾರ್ಷಿಕ ಜಾತ್ರೆಗಳಲ್ಲೂ ಆಯಾ ದಿವಸಗಳಿಗೆ ನೇಮಕವಾದ ದಹನಬಲಿಗಳನ್ನು ಸಮರ್ಪಿಸುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಿನಂಪ್ರತಿ ಮೋಶೆಯ ಆಜ್ಞೆಯ ಪ್ರಕಾರ ವಿಶ್ರಾಂತಿಯ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಯೂ ವರುಷಕ್ಕೆ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಗುಡಾರಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು.