2 Chronicles 8:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೊಲೊಮೋನನು ಯಾಜಕರಿಗಾಗಲಿ ಲೇವಿಯರಿಗಾಗಲಿ ಕೊಟ್ಟ ಆಜ್ಞೆಗಳನ್ನು ಯಾರೂ ಬದಲಿಸಲಿಲ್ಲ; ಅವುಗಳಿಗೆ ಯಾರೂ ಅವಿಧೇಯರಾಗಲಿಲ್ಲ; ಬೆಲೆಬಾಳುವ ವಸ್ತುಗಳ ಸಂಗ್ರಹಣ ಕಾರ್ಯದಲ್ಲೂ ಅವರು ಜಾಗರೂಕರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಜನು ಯಾಜಕರನ್ನೂ, ಲೇವಿಯರನ್ನೂ, ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಸ್ವಲ್ಪವಾದರೂ ಮೀರಲಿಲ್ಲ.
Kannada BSI Bible 2016
ಅವರು ಯಾವ ಕಾರ್ಯ ದಲ್ಲಾ ದರೂ ಬೊಕ್ಕಸಗಳಲ್ಲಾದರೂ ಅರಸನು ಯಾಜಕರಿಗೂ ಲೇವಿಯರಿಗೂ ಹೇಳಿದ ಆಜ್ಞೆಯನ್ನು ತೊರೆದು ಬಿಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಯಾಜಕರನ್ನೂ ಲೇವಿಯರನ್ನೂ ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಸ್ವಲ್ಪವಾದರೂ ಮೀರಲಿಲ್ಲ.
Kannada Bible (KNCL) BSI 2016
ಅವನು ಯಾಜಕರನ್ನೂ ಲೇವಿಯರನ್ನೂ ಅರಮನೆಯ ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಕಿಂಚಿತ್ತಾದರೂ ಮೀರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯಾವ ಕಾರ್ಯದಲ್ಲಾದರೂ, ಬೊಕ್ಕಸಗಳಲ್ಲಾದರೂ ಅರಸನು ಯಾಜಕರಿಗೂ ಲೇವಿಯರಿಗೂ ಹೇಳಿದ ಆಜ್ಞೆಯನ್ನು ಮೀರಲಿಲ್ಲ.