2 Chronicles 8:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೂರಾಮನು ಸೊಲೊಮೋನನಿಗೋಸ್ಕರ ಹಡಗುಗಳನ್ನು ಕಳುಹಿಸಿದನು. ಅವನ ಜನರೇ ಅದನ್ನು ನಡೆಸಿದರು. ಅವರು ಒಳ್ಳೆಯ ನುರಿತ ನಾವಿಕರಾಗಿದ್ದರು. ಹೂರಾಮನ ನಾವಿಕರು ಸೊಲೊಮೋನನ ಸೇವಕರೊಂದಿಗೆ ಓಫೀರ್ ದೇಶಕ್ಕೆ ಹೋಗಿ ಅಲ್ಲಿಂದ ಹದಿನೇಳು ಟನ್ ಬಂಗಾರವನ್ನು ಸೊಲೊಮೋನನಿಗೆ ತಂದುಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೂರಾಮನು ಅವನಿಗೆ ತನ್ನ ಆಳುಗಳ ಮುಖಾಂತರ ಹಡುಗುಗಳನ್ನು ಕಳುಹಿಸಿದ್ದಲ್ಲದೆ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ನಾವಿಕರನ್ನು ಕಳುಹಿಸಿದನು. ಅವರು ಸೊಲೊಮೋನನ ಸೇವಕರೊಡನೆ ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ಬಂಗಾರವನ್ನು ತಂದುಕೊಟ್ಟರು.
Kannada BSI Bible 2016
ಹೂರಾಮನು ತನ್ನ ಸೇವಕರ ಕೈಯಿಂದ ಹಡಗುಗಳನ್ನೂ ಸಮುದ್ರ ತಿಳಿದ ವರಾದ ಸೇವಕರನ್ನೂ ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ ಅಲ್ಲಿಂದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ತೂಕ ಬಂಗಾರವನ್ನು ತೆಗೆದುಕೊಂಡು ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೂರಾಮನು ಅವನಿಗೆ ತನ್ನ ಆಳುಗಳ ಮುಖಾಂತರ ಹಡಗುಗಳನ್ನು ಕಳುಹಿಸಿದ್ದಲ್ಲದೆ ಸಮುದ್ರಪ್ರಯಾಣದಲ್ಲಿ ನಿಪುಣರಾದ ನಾವಿಕರನ್ನೂ ಕಳುಹಿಸಿದನು. ಅವರು ಸೊಲೊಮೋನನ ಸೇವಕರೊಡನೆ ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ಬಂಗಾರವನ್ನು ತಂದುಕೊಟ್ಟರು.
Kannada Bible (KNCL) BSI 2016
ಹೂರಾಮನು ಅವನಿಗೆ ತನ್ನ ಆಳುಗಳ ಮುಖಾಂತರ ಹಡಗುಗಳನ್ನು ಕಳುಹಿಸಿದ್ದಲ್ಲದೆ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ನಾವಿಕರನ್ನೂ ಕಳುಹಿಸಿದನು. ಅವರು ಸೊಲೊಮೋನನ ಸೇವಕರೊಡನೆ ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸ ಸೊಲೊಮೋನನಿಗೆ 15,000 ಕಿಲೋಗ್ರಾಂಗಿಂತ ಹೆಚ್ಚು ಬಂಗಾರವನ್ನೂ ತಂದುಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀರಾಮನು ತನ್ನ ಸೇವಕರ ಮುಖಾಂತರ ಹಡಗುಗಳನ್ನೂ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ, ಅಲ್ಲಿಂದ ಅರಸನಾದ ಸೊಲೊಮೋನನಿಗೆ 15,000 ಕಿಲೋಗ್ರಾಂ ಬಂಗಾರವನ್ನು ತೆಗೆದುಕೊಂಡು ಬಂದರು.