2 Chronicles 9:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶೆಬದ ರಾಣಿಯು ಕೇಳಿದ್ದನ್ನೆಲ್ಲಾ ಸೊಲೊಮೋನನು ಕೊಟ್ಟನು. ಆಕೆಯು ಅವನಿಗೆ ತಂದದ್ದಕ್ಕಿಂತ ಹೆಚ್ಚಾಗಿ ಆಕೆಗೆ ಕೊಟ್ಟನು. ಅನಂತರ ಶೆಬದ ರಾಣಿಯೂ ಆಕೆಯ ಪರಿವಾರವೂ ತಮ್ಮ ದೇಶಕ್ಕೆ ತೆರಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಸೊಲೊಮೋನನು ಶೆಬಾದ ರಾಣಿಯಿಂದ ತನಗೆ ದೊರಕಿದ ಬಹುಮಾನಕ್ಕೆ ಪ್ರತಿಯಾಗಿ, ಆಕೆಗೆ ತಾನು ಕೊಟ್ಟು ವಸ್ತುಗಳನ್ನಲ್ಲದೆ, ಆಕೆಯು ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದವರೊಡನೆ ಸ್ವದೇಶಕ್ಕೆ ಹೊರಟುಹೋದಳು.
Kannada BSI Bible 2016
ಶೆಬದ ರಾಣಿಯು ಅರಸನಿಗೆ ತಂದದ್ದಕ್ಕೆ ಬದ ಲಾಗಿ ಅರಸನಾದ ಸೊಲೊಮೋನನು ಕೊಟ್ಟದ್ದು ಹೊರತಾಗಿ ಅವಳು ಇಚ್ಛಿಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಆಗ ಅವಳು ತಿರಿಗಿಕೊಂಡು ತನ್ನ ದೇಶಕ್ಕೆ ಹೋದಳು; ಅವಳೂ ಅವಳ ಸೇವಕರೂ ಕೂಡ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಸೊಲೊಮೋನನು ಶೆಬದ ರಾಣಿಯಿಂದ ತನಗೆ ದೊರಕಿದ ಬಹುಮಾನಕ್ಕೆ ಪ್ರತಿಯಾಗಿ ಆಕೆಗೆ ತಾನು ಕೊಟ್ಟ ವಸ್ತುಗಳನ್ನಲ್ಲದೆ ಆಕೆಯು ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದವರೊಡನೆ ಸ್ವದೇಶಕ್ಕೆ ಹೊರಟುಹೋದಳು.
Kannada Bible (KNCL) BSI 2016
ಅರಸ ಸೊಲೊಮೋನನು ಶೆಬಾದ ರಾಣಿಯಿಂದ ತನಗೆ ದೊರಕಿದ ಬಹುಮಾನಕ್ಕೆ ಪ್ರತಿಯಾಗಿ ಆಕೆಗೆ ತಾನು ಕೊಟ್ಟ ವಸ್ತುಗಳನ್ನಲ್ಲದೆ ಆಕೆ ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆ ತನ್ನ ಪರಿವಾರದವರೊಡನೆ ಸ್ವದೇಶಕ್ಕೆ ಹೊರಟುಹೋದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಸೊಲೊಮೋನನು, ಶೆಬದ ರಾಣಿಯು ಅರಸನಿಗೆ ತಂದ ಕಾಣಿಕೆಗಳ ಪ್ರತಿಯಾಗಿ ಕೊಟ್ಟದ್ದಲ್ಲದೆ, ಅವಳು ಬಯಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಅನಂತರ ಅವಳು ತನ್ನ ಸೇವಕರೊಡನೆ ತಿರುಗಿ ತಮ್ಮ ದೇಶಕ್ಕೆ ಹೋದಳು.