2 Chronicles 9:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೊಲೊಮೋನನು ಇನ್ನೂರು ದೊಡ್ಡ ಗಾತ್ರದ ಗುರಾಣಿಗಳನ್ನು ಚಿನ್ನದ ತಗಡಿನಿಂದ ಮಾಡಿಸಿದನು. ಪ್ರತಿಯೊಂದು ಗುರಾಣಿಗೆ ಸುಮಾರು ಎಳು ಕಿಲೋಗ್ರಾಂಗಳಷ್ಟು ಚಿನ್ನವು ಹಿಡಿಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು; ಪ್ರತಿಯೊಂದು ಗುರಾಣಿಗೆ ಆರುನೂರು ತೊಲಾ ಬಂಗಾರವು ಹಿಡಿಸುತ್ತಿತ್ತು.
Kannada BSI Bible 2016
ಅರಸನಾದ ಸೊಲೊಮೋನನು ಅಪರಂಜಿಯಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿದನು. ಒಂದೊಂದು ಖೇಡ್ಯಕ್ಕೆ ಆರುನೂರು ಶೆಕೇಲು ತೂಕ ಅಪರಂಜಿ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು; ಪ್ರತಿಯೊಂದು ಗುರಾಣಿಗೆ ಆರುನೂರು ತೊಲೆ ಬಂಗಾರ ಹಿಡಿಯಿತು.
Kannada Bible (KNCL) BSI 2016
ಅರಸ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು; ಪ್ರತಿಯೊಂದು ಗುರಾಣಿಗೆ ಸುಮಾರು ಏಳು ಕಿಲೋಗ್ರಾಂ ಬಂಗಾರ ಹಿಡಿಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿ ಸುಮಾರು ಏಳು ಕಿಲೋಗ್ರಾಂ ತೂಕದ ಬಂಗಾರವಿತ್ತು.