2 Chronicles 9:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಲ್ಲದೆ ಮುನ್ನೂರು ಸಣ್ಣ ಗುರಾಣಿಗಳನ್ನೂ ಸೊಲೊಮೋನನು ಚಿನ್ನದ ತಗಡಿನಿಂದ ಮಾಡಿಸಿದನು; ಒಂದೊಂದು ಗುರಾಣಿಗೆ ಸುಮಾರು ನಾಲ್ಕು ಪೌಂಡ್ ಬಂಗಾರ ಹಿಡಿಯಿತು. ಈ ಗುರಾಣಿಗಳನ್ನೆಲ್ಲಾ ಸೊಲೊಮೋನನು “ಲೆಬನೋನಿನ ತೋಪು” ಎಂಬ ಅರಮನೆಯಲ್ಲಿ ಶೇಖರಿಸಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು; ಪ್ರತಿಯೊಂದು ಖೇಡ್ಯಕ್ಕೆ ಮುನ್ನೂರು ತೊಲಾ ಬಂಗಾರ ಬೇಕಾಗುತ್ತಿತ್ತು. ಅರಸನು ಇವುಗಳನ್ನು ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿರಿಸಿದನು.
Kannada BSI Bible 2016
ಹಾಗೆಯೇ ಅಪರಂಜಿಯಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾ ಣಿಗೆ ಮುನ್ನೂರು ಶೆಕೇಲು ಅಪರಂಜಿ ಇತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು; ಪ್ರತಿಯೊಂದು ಖೇಡ್ಯಕ್ಕೆ ಮುನ್ನೂರು ತೊಲೆ ಬಂಗಾರ ಹಿಡಿಯಿತು. ಅವನು ಇವುಗಳನ್ನು ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿರಿಸಿದನು.
Kannada Bible (KNCL) BSI 2016
ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು; ಪ್ರತಿಯೊಂದು ಖೇಡ್ಯಕ್ಕೆ ಎರಡು ಕಿಲೋಗ್ರಾಂ ಬಂಗಾರ ಹಿಡಿಯಿತು. ಅವನು ಇವುಗಳನ್ನು ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಬಂಗಾರದಿಂದ ಮುನ್ನೂರು ಸಣ್ಣ ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ಸುಮಾರು ಎರಡು ಕಿಲೋಗ್ರಾಂ ಬಂಗಾರ ಹಿಡಿಯಿತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.