2 Chronicles 9:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳೇ. “ಲೆಬನೋನಿನ ತೋಪು” ಎಂಬ ಅರಮನೆಯಲ್ಲಿ ಇಟ್ಟಿದ್ದ ಎಲ್ಲಾ ವಸ್ತುಗಳು ಅಪ್ಪಟ ಬಂಗಾರದಿಂದಲೇ ಮಾಡಿದವುಗಳಾಗಿದ್ದವು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳಾಗಿದ್ದವು. ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದ ಎಲ್ಲಾ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.
Kannada BSI Bible 2016
ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹೀಗೆಯೇ ಅಪ ರಂಜಿಯವುಗಳು. ಬೆಳ್ಳಿಯದು ಒಂದೂ ಇರಲಿಲ್ಲ. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದ ಎಲ್ಲಾ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.
Kannada Bible (KNCL) BSI 2016
ಅರಸ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು. ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದ ಎಲ್ಲಾ ಸಾಮಗ್ರಿಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಅರಮನೆಯ ಎಲ್ಲಾ ಸಾಮಗ್ರಿಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ, ಆದುದರಿಂದ ಅವನಲ್ಲಿ ಬೆಳ್ಳಿಯ ವಸ್ತು ಒಂದಾದರೂ ಕಾಣಿಸಲಿಲ್ಲ.