2 Chronicles 9:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಅವನಿಗೆ ದಯಪಾಲಿಸಿದ ಜ್ಞಾನವನ್ನು ನೋಡಿ ಅವನಿಂದ ಜ್ಞಾನವಾಕ್ಯಗಳನ್ನು ಕೇಳಲು ಲೋಕದ ರಾಜರುಗಳು ಅವನ ಬಳಿಗೆ ಬರುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂರಾಜರೆಲ್ಲರೂ, ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಸೊಲೊಮೋನ ದರ್ಶನಕ್ಕೆ ಬರುತ್ತಿದ್ದರು.
Kannada BSI Bible 2016
ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂರಾಜರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನ ವಾಕ್ಯಗಳನ್ನು ಕೇಳುವದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು.
Kannada Bible (KNCL) BSI 2016
ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಭೂರಾಜರೆಲ್ಲರು ಅವನ ದರ್ಶನಕ್ಕೆ ಬರುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಸೊಲೊಮೋನನ ಹೃದಯದಲ್ಲಿ ಕೊಟ್ಟಿದ್ದ ಜ್ಞಾನವನ್ನು ಕೇಳುವುದಕ್ಕಾಗಿ ಭೂಲೋಕದಲ್ಲಿರುವ ಸಮಸ್ತ ಅರಸರು ಅವನ ದರ್ಶನವನ್ನು ಬಯಸಿದರು.