2 Chronicles 9:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಬಳಿಕ ಸೊಲೊಮೋನನು ತನ್ನ ಪೂರ್ವಿಕರೊಂದಿಗೆ ಸೇರಿದನು. ಅವನನ್ನು ದಾವೀದನಗರದಲ್ಲಿ ಹೂಳಿಟ್ಟರು. ಸೊಲೊಮೋನನ ನಂತರ ಅವನ ಮಗನಾದ ರೆಹಬ್ಬಾಮನು ಅರಸನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆನಂತರ ಸೊಲೊಮೋನನು ತನ್ನ ಪೂರ್ವಿಕರ ಬಳಿಗೆ ಸೇರಿದನು, ಅವನ ಶವವನ್ನು ಅವನ ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು; ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು.
Kannada BSI Bible 2016
ಸೊಲೊಮೋನನು ತನ್ನ ಪಿತೃಗಳ ಸಂಗಡ ಮಲಗಿ ದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು. ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಶವವನ್ನು ಅವನ ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿ ಮಾಡಿದರು; ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು.
Kannada Bible (KNCL) BSI 2016
ಅವನ ಶವವನ್ನು ಅವನ ತಂದೆ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ರೆಹಬ್ಬಾಮನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೊಲೊಮೋನನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ತಂದೆ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ರೆಹಬ್ಬಾಮನು ಅವನಿಗೆ ಬದಲಾಗಿ ಅರಸನಾದನು.