2 Chronicles 9:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಇಲ್ಲಿಗೆ ಬಂದು ಅವುಗಳನ್ನೆಲ್ಲಾ ಕಣ್ಣಾರೆ ನೋಡುವ ತನಕ ನಾನು ಅವುಗಳನ್ನು ನಂಬಿರಲಿಲ್ಲ. ಆದರೆ ನಾನು ಕೇಳಿದ್ದು ನಿನ್ನ ಜ್ಞಾನದ ಅರ್ಧದಷ್ಟೂ ಇಲ್ಲವೆಂದು ಈಗ ನನಗೆ ತಿಳಿಯಿತು. ನಾನು ಕೇಳಿದ್ದಕ್ಕಿಂತಲೂ ನೀನು ಮಹಾಜ್ಞಾನಿಯಾಗಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವವರೆಗೆ ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ; ಈಗ ನೋಡಿದರೆ, ನಿನ್ನ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಉನ್ನತವಾಗಿದೆ; ಜನರು ನಿನ್ನ ಜ್ಞಾನ ಮತ್ತು ಐಶ್ವರ್ಯದ ಬಗ್ಗೆ ಅರ್ಧವನ್ನಾದರೂ ನನಗೆ ಹೇಳಿರಲಿಲ್ಲ.
Kannada BSI Bible 2016
ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿನ್ನ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿದೆ; ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.
Kannada Bible (KNCL) BSI 2016
ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ, ನಿಮ್ಮ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿದೆ; ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವವರೆಗೂ ಜನರ ಮಾತುಗಳನ್ನು ನಂಬದೆ ಹೋದೆನು. ಜನರು ನನಗೆ ನಿನ್ನ ಮಹಾಜ್ಞಾನದಲ್ಲಿ ಅರ್ಧವನ್ನಾದರೂ ಹೇಳಲಿಲ್ಲ. ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಎಷ್ಟೋ ಅಧಿಕವಾಗಿದೆ.