2 Corinthians 1:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರಣದ ಈ ಮಹಾ ಅಪಾಯಗಳಿಂದ ದೇವರು ನಮ್ಮನ್ನು ರಕ್ಷಿಸಿದನು. ಮತ್ತು ಇನ್ನು ಮುಂದೆಯೂ ರಕ್ಷಿಸುವನು. ನಾವು ಆತನಲ್ಲಿ ಭರವಸೆ ಇಟ್ಟಿದ್ದೇವೆ. ಆತನು ನಮ್ಮನ್ನು ಇನ್ನು ಮುಂದೆಯೂ ರಕ್ಷಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನಮ್ಮನ್ನು ಅಂಥ ಭಯಂಕರ ಮರಣದಿಂದ ತಪ್ಪಿಸಿದನು. ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವುದರ ನಿಮಿತ್ತವಾಗಿ ಇನ್ನು ಮುಂದೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿಮಿತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವುದು.
Kannada BSI Bible 2016
ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನಮ್ಮನ್ನು ಎಂಥ ಭಯಂಕರಮರಣದಿಂದ ತಪ್ಪಿಸಿದನು; ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವವರಾಗಿ ಸಹಕಾರಿಗಳಾಗಿರುವದರಿಂದ ಆತನು ಇನ್ನು ಮೇಲೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿವಿುತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವದು.
Kannada Bible (KNCL) BSI 2016
ದೇವರೇ ನಮ್ಮನ್ನು ಈ ಭಯಂಕರ ಮರಣದಿಂದ ಪಾರುಮಾಡಿದರು. ಇನ್ನು ಮುಂದಕ್ಕೂ ಪಾರುಮಾಡುವರು. ಹೌದು, ನೀವು ಸಹ ನಮಗಾಗಿ ಪ್ರಾರ್ಥಿಸುತ್ತಾ ನಮ್ಮೊಡನೆ ಸಹಕರಿಸಿದರೆ, ಇನ್ನು ಮುಂದಕ್ಕೂ ನಮ್ಮನ್ನು ಪಾರುಮಾಡುವರು ಎಂಬ ಭರವಸೆಯಿಂದ ಇದ್ದೇವೆ. ಇದರ ಫಲವಾಗಿ ನಮಗೆ ದೊರೆಯುವ ವರದಾನಗಳಿಗಾಗಿ ಅನೇಕರು ನಮ್ಮ ಪರವಾಗಿ ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಭರವಸೆಯಿಟ್ಟ ದೇವರು ಅಂಥಾ ಮರಣಕರ ಅಪಾಯದಿಂದ ನಮ್ಮನ್ನು ತಪ್ಪಿಸಿದ್ದಾರೆ ಮತ್ತು ಮುಂದೆಯೂ ಅಪಾಯಗಳಿಂದ ನಮ್ಮನ್ನು ಪಾರುಮಾಡುವರು.