2 Corinthians 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಓದಿ ಅರ್ಥಮಾಡಿಕೊಳ್ಳಬಲ್ಲ ಸಂಗತಿಗಳನ್ನು ಮಾತ್ರ ನಾನು ನಿಮಗೆ ಬರೆಯುತ್ತೇನೆ. ನಮ್ಮ ವಿಷಯವಾದ ಕೆಲವು ಸಂಗತಿಗಳನ್ನು ನೀವು ಈಗಾಗಲೇ ಸ್ಪಲ್ಪ ಅರ್ಥಮಾಡಿಕೊಂಡಂತೆ ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುತ್ತೀರೆಂಬ ನಿರೀಕ್ಷೆ ನನಗಿದೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನಾವು ನಿಮ್ಮ ವಿಷಯದಲ್ಲಿ ಹೆಮ್ಮೆಪಡುವಂತೆ ನೀವೂ ನಮ್ಮ ವಿಷಯದಲ್ಲಿ ಹೆಮ್ಮೆಪಡಲಾಗುವಂತೆ ನೀವು ಅರ್ಥಮಾಡಿಕೊಳ್ಳುತ್ತೀರಿ ಎಂಬ ಭರವಸೆ ನನಗಿದೆ. (Verses 13-14)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನಮ್ಮ ಪತ್ರಿಕೆಗಳಲ್ಲಿ ಓದಿ ಅರ್ಥಮಾಡಿಕೊಂಡ ಸಂಗತಿಗಳನ್ನೇ ಹೊರತು ಬೇರೆ ಯಾವುದನ್ನು ನಾವು ನಿಮಗೆ ಬರೆಯಲಿಲ್ಲ.
Kannada BSI Bible 2016
ನೀವು ಓದಿ ಒಪ್ಪಿಕೊಂಡ ಸಂಗತಿಗಳನ್ನೇ ಅಲ್ಲದೆ ಬೇರೆ ಯಾವದನ್ನೂ ನಾವು ನಿಮಗೆ ಬರೆಯಲಿಲ್ಲ; ಹಾಗೆಯೇ ನೀವು ಕಡೇತನಕ ಒಪ್ಪಿಕೊಳ್ಳುವಿರೆಂದು ನಾನು ಭರವಸವುಳ್ಳವನಾಗಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದೇ ನಮಗಿರುವ ಉಲ್ಲಾಸ. ನೀವು ನಮ್ಮ ಪತ್ರಿಕೆಗಳಲ್ಲಿ ಓದಿ ಒಪ್ಪಿಕೊಂಡ ಸಂಗತಿಗಳನ್ನೇ ಅಲ್ಲದೆ ಬೇರೆ ಯಾವದನ್ನೂ ನಾವು ನಿಮಗೆ ಬರೆಯಲಿಲ್ಲ.
Kannada Bible (KNCL) BSI 2016
ನೀವು ಓದಿ ಗ್ರಹಿಸಿಕೊಳ್ಳಬಲ್ಲ ವಿಷಯಗಳನ್ನು ಮಾತ್ರವೇ ನಾವು ನಿಮಗೆ ಬರೆದಿದ್ದೇವೆ. ನಮ್ಮನ್ನು ನೀವಿನ್ನೂ ಭಾಗಶಃ ಅರಿತುಕೊಂಡಿದ್ದೀರಿ. ಮುಂದಕ್ಕಾದರೂ ನೀವು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವಿರೆಂಬ ಭರವಸೆ ನನಗಿದೆ. ಹಾಗೆಯೇ ‘ಪ್ರಭುವಿನ ದಿನದಂದು ನಾವು ನಿಮ್ಮನ್ನು ಕುರಿತು ಹೆಮ್ಮೆಪಡುವಂತೆ ನೀವೂ ನಮ್ಮನ್ನು ಕುರಿತು ಹೆಮ್ಮೆಪಡುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮಗೆ ಓದಲು ಅಥವಾ ಅರ್ಥಮಾಡಿಕೊಳ್ಳಲು ಅಸಾಧ್ಯವಾದ ಯಾವುದನ್ನೂ ನಾವು ಬರೆಯಲಿಲ್ಲ.