2 Corinthians 1:14 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 13
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರ್ಥಮಾಡಿಕೊಂಡಿದ್ದೀರಿ ಕಡೆ ವರೆಗೂ ಒಪ್ಪಿಕೊಳ್ಳುವಿರಿ ಎಂಬುದಾಗಿಯೂ, ನಮ್ಮ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ನೀವು ನಮ್ಮ ಅಭಿಮಾನಕ್ಕೆ ಕಾರಣವಾದಂತೆ ನಾವು ನಿಮ್ಮ ಅಭಿಮಾನಕ್ಕೆ ಕಾರಣರಾಗಿರುವೆವು ಎಂದು ನೀವು ಒಪ್ಪಿಕೊಳ್ಳುತ್ತೀರಿ.
Kannada BSI Bible 2016
ನೀವು ಸಹ ಸ್ವಲ್ಪಮಟ್ಟಿಗೆ ನಮ್ಮನ್ನು ಒಪ್ಪಿಕೊಂಡು ನಮ್ಮ ಕರ್ತನಾದ ಯೇಸುವಿನ ದಿನದಲ್ಲಿ ನೀವು ನಮಗೆ ಉಲ್ಲಾಸಕ್ಕೆ ಕಾರಣರಾಗಿರುವಂತೆಯೇ ನಾವು ನಿಮಗೆ ಉಲ್ಲಾಸಕ್ಕೆ ಕಾರಣರಾಗಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ನಿಮಗೆ ಉಲ್ಲಾಸಕಾರಣವಾಗಿದ್ದೇವೆಂಬದನ್ನು ನೀವು ಸ್ವಲ್ಪ ಮಟ್ಟಿಗೆ ಒಪ್ಪಿಕೊಂಡಂತೆಯೇ ಕಡೇ ತನಕ ಒಪ್ಪಿಕೊಳ್ಳುವಿರೆಂದು ನಿರೀಕ್ಷಿಸುತ್ತೇನೆ. ಹಾಗೆಯೇ ನೀವೂ ನಮ್ಮ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯಲ್ಲಿ ನಮಗೆ ಉಲ್ಲಾಸಕಾರಣವಾಗುವಿರಿ ಎಂದು ನಿರೀಕ್ಷಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರಿತುಕೊಂಡಿದ್ದೀರಿ. ಆದರೆ ಕರ್ತ ಆಗಿರುವ ಯೇಸುವಿನ ಪುನರಾಗಮನ ದಿನದಲ್ಲಿ ನಾವು ನಿಮ್ಮ ಬಗ್ಗೆ ಹೆಮ್ಮೆ ಪಡುವಂತೆ, ನಮ್ಮ ಬಗ್ಗೆ ಹೆಮ್ಮೆ ಪಡಲು ನೀವು ಸಂಪೂರ್ಣವಾಗಿ ನಮ್ಮನ್ನು ಅರಿತುಕೊಳ್ಳುವಿರೆಂಬ ನಿರೀಕ್ಷೆ ನಮಗಿದೆ.