2 Corinthians 1:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಮಕೆದೋನಿಯಕ್ಕೆ ಹೋಗುವಾಗಲೂ ಬಳಿಕ ಅಲ್ಲಿಂದ ಹಿಂತಿರುಗಿ ಬರುವಾಗಲೂ ನಿಮ್ಮ ಬಳಿಗೆ ಬರಬೇಕೆಂದಿದ್ದೆ. ಜುದೇಯಕ್ಕೆ ಪ್ರವಾಸ ಕೈಕೊಳ್ಳಲು ನಿಮ್ಮಿಂದ ಸಹಾಯವನ್ನು ಪಡೆದುಕೊಳ್ಳಬೇಕೆಂದಿದ್ದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊದಲು ನಿಮ್ಮ ಬಳಿಗೆ ಬಂದು ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ಅನಂತರ ಮಕೆದೋನ್ಯವನ್ನು ಬಿಟ್ಟು ತಿರುಗಿ ನಿಮ್ಮ ಬಳಿಗೆ ಬಂದು ನೀವು ನನ್ನನ್ನು ಯೂದಾಯಕ್ಕೆ ಕಳುಹಿಸಿ ಕೊಡಬೇಕೆಂದು ಯೋಚಿಸಿದ್ದೆನು.
Kannada BSI Bible 2016
ತರುವಾಯ ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ತಿರಿಗಿ ಮಕೆದೋನ್ಯದಿಂದ ನಿಮ್ಮ ಬಳಿಗೆ ಬಂದು ನಿಮ್ಮಿಂದ ಯೂದಾಯಕ್ಕೆ ಸಾಗಕಳುಹಿಸಲ್ಪಡುವಂತೆಯೂ ಯೋಚಿಸಿದ್ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲು ನಿಮ್ಮ ಬಳಿಗೆ ಬಂದು ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ಆಮೇಲೆ ಮಕೆದೋನ್ಯವನ್ನು ಬಿಟ್ಟು ತಿರಿಗಿ ನಿಮ್ಮ ಬಳಿಗೆ ಬಂದು ನಿವ್ಮಿುಂದ ಯೂದಾಯಕ್ಕೆ ಸಾಗಕಳುಹಿಸಲ್ಪಡಬೇಕೆಂದು ಯೋಚಿಸಿದ್ದೆನು.
Kannada Bible (KNCL) BSI 2016
ನಾನು ಮಕೆದೋನಿಯಕ್ಕೆ ಹೋಗುವ ದಾರಿಯಲ್ಲಿ ಒಮ್ಮೆ ನಿಮ್ಮನ್ನು ಭೇಟಿಮಾಡಬೇಕು ಎಂದಿದ್ದೆ; ಮಕೆದೋನಿಯದಿಂದ ಹಿಂದಿರುಗುವಾಗ ಇನ್ನೊಮ್ಮೆ ಭೇಟಿಯಿತ್ತು ನಿಮ್ಮ ನೆರವಿನಿಂದ ಜುದೇಯ ಪ್ರವಾಸವನ್ನು ಕೈಗೊಳ್ಳಬೇಕೆಂದು ಆಲೋಚಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಕೆದೋನ್ಯಕ್ಕೆ ಹೋಗುವಾಗ ನಾನು ನಿಮ್ಮನ್ನು ಸಂದರ್ಶಿಸುವೆನು, ಅಲ್ಲಿಂದ ಹಿಂದಿರುಗಿ ಬರುವಾಗಲೂ ನಿಮ್ಮನ್ನು ಸಂದರ್ಶಿಸಲು ನಾನೇ ಯೂದಾಯಕ್ಕೆ ಬರುವಂತೆ ಯೋಚನೆ ಮಾಡಿದ್ದೆನು.