2 Corinthians 1:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಆ ಯೋಜನೆಗಳನ್ನು ಮಾಡಿದಾಗ ನಿಮ್ಮ ಬಳಿಗೆ ಬರುವ ಉದ್ದೇಶ ನಿಜವಾಗಿಯೂ ನನಗಿರಲಿಲ್ಲವೆಂದು ಯೋಚಿಸುತ್ತೀರಾ? ನಾನು ಪ್ರಾಪಂಚಿಕರಂತೆ ಯೋಜನೆಗಳನ್ನು ಮಾಡಿದೆನೋ? ಅವರಾದರೋ ಯೋಜನೆಗಳನ್ನು ಮಾಡುವಾಗ “ಹೌದು, ಹೌದು” ಎಂತಲೂ ಅದೇ ಸಮಯದಲ್ಲಿ “ಇಲ್ಲ, ಇಲ್ಲ” ಎಂತಲೂ ಹೇಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಯೋಚಿಸಿದ್ದರಿಂದ ನಾನು ಚಂಚಲಚಿತ್ತನಾಗಿದ್ದೇನೋ? ಕೇವಲ ಪ್ರಾಪಂಚಿಕ ಗುಣಮಟ್ಟಕ್ಕೆ ಯೋಚಿಸಿ ಈ ಕ್ಷಣ “ಹೌದು” ಮರು ಕ್ಷಣ “ಇಲ್ಲ” ಎಂದು ಹೇಳುವವನಂತಿದ್ದೇನೋ? ಎಂದಿಗೂ ಇಲ್ಲ.
Kannada BSI Bible 2016
ಆದದರಿಂದ ನಾನು ಹೀಗೆ ಮನಸ್ಸು ಮಾಡಿದಾಗ ಹಗುರು ಭಾವನೆಯನ್ನು ತೋರಿಸಿದೆನೋ? ಇಲ್ಲವೆ ನಾನು ಉದ್ದೇಶಿಸದವು ಗಳು ಹೌದು, ಹೌದು ಅಂದ ಮೇಲೆ ಅಲ್ಲ, ಅಲ್ಲ ಅನ್ನುವಂತೆ ಮಾನುಷ್ಯ ರೀತಿಯಲ್ಲಿ ಉದ್ದೇಶಿಸು ತ್ತೇನೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ಯೋಚಿಸಿದಾಗ ಚಪಲಚಿತ್ತನಾಗಿದ್ದೆನೋ? ನಾನು ಯೋಚಿಸುವದನ್ನು ಕೇವಲ ಮಾನುಷಬುದ್ಧಿಯಿಂದ ಯೋಚಿಸಿ ಹೌದು ಹೌದು ಅಂದ ಮೇಲೆ ಅಲ್ಲ ಅಲ್ಲ ಅನ್ನುವವನಾಗಿದ್ದೇನೋ?
Kannada Bible (KNCL) BSI 2016
ಹೀಗೆ ಆಲೋಚಿಸುತ್ತಿದ್ದಾಗ ನಾನು ಚಂಚಲಚಿತ್ತನಾಗಿದ್ದೆನೋ? ಕೇವಲ ಪ್ರಾಪಂಚಿಕನಂತೆ ಈ ಕ್ಷಣ ಹೌದು, ಮರುಕ್ಷಣ ಇಲ್ಲ ಎಂದು ಹೇಳುವವನಂತಿದ್ದೆನೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಇದನ್ನು ಯೋಚಿಸಿದಾಗ, ಚಂಚಲಹೃದಯವನ್ನು ತಾಳಿದೆನೋ? ಅಥವಾ, ಒಮ್ಮೆ ಅದು “ಹೌದು, ಹೌದು” ಅದೇ ಕ್ಷಣದಲ್ಲಿ ಅದು “ಅಲ್ಲ, ಅಲ್ಲ” ಎಂದು ನಾನು ಲೋಕ ರೀತಿಯಾಗಿ ಯೋಜನೆಯನ್ನು ತಯಾರಿಸಿದ್ದೇನೋ?