2 Corinthians 1:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ದೇವರನ್ನು ನಂಬಬಲ್ಲವರಾಗಿದ್ದರೆ, ನಾವು ನಿಮಗೆ ಏಕಕಾಲದಲ್ಲಿಯೇ “ಹೌದು” ಮತ್ತು “ಇಲ್ಲ” ಎಂದು ಹೇಳಲಿಲ್ಲವೆಂದು ನೀವು ನಂಬಬಲ್ಲಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ನಂಬಿಗಸ್ತನಾಗಿರುವಂತೆ ನಾವು ನಿಮಗೆ ಹೇಳುವ ಮಾತು ಒಂದು ಸಾರಿ “ಹೌದೆಂದು” ಮತ್ತೊಂದು ಸಾರಿ “ಇಲ್ಲವೆಂದು” ಆಗಿರಲು ಸಾಧ್ಯವಿಲ್ಲ. ಅದಕ್ಕೆ ನಂಬಿಗಸ್ತನಾದ ದೇವರೇ ಸಾಕ್ಷಿಯಾಗಿದ್ದಾನೆ.
Kannada BSI Bible 2016
ಆದರೆ ದೇವರು ಸತ್ಯವಂತನಾಗಿರುವ ಹಾಗೆಯೇ ನಮ್ಮ ಮಾತು ಹೌದೆಂದೂ ಅಲ್ಲವೆಂದೂ ಇರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಂಬಿಗಸ್ತನಾಗಿರುವ ದೇವರಾಣೆ, ನಾವು ನಿಮಗೆ ಹೇಳುವ ಮಾತು ಒಂದು ಸಾರಿ ಹೌದೆಂದು ಒಂದು ಸಾರಿ ಅಲ್ಲವೆಂದು ಇರುವದಿಲ್ಲ.
Kannada Bible (KNCL) BSI 2016
ಎಂದಿಗೂ ಇಲ್ಲ, ನಾನು ನಿಮಗೆ ಕೊಟ್ಟ ಮಾತು ದ್ವಂದ್ವಾರ್ಥವುಳ್ಳದ್ದಾಗಿರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಶ್ಚಯವಾಗಿ, ದೇವರು ಹೇಗೆ ಪ್ರಾಮಾಣಿಕತೆಗೆ ಯೋಗ್ಯರೋ, ಹಾಗೆಯೇ ನಾವು ನಿಮಗೆ ಕೊಟ್ಟ ಸಂದೇಶವೂ, ಒಮ್ಮೆ “ಹೌದು,” ಒಮ್ಮೆ “ಅಲ್ಲ” ಎಂದಾಗಿರುವುದಿಲ್ಲ.