2 Corinthians 1:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮನ್ನು ಶಿಕ್ಷಿಸುವುದಕ್ಕಾಗಲಿ ನೋಯಿಸುವುದಕ್ಕಾಗಲಿ ನನಗೆ ಇಷ್ಟವಿರಲಿಲ್ಲ. ಆದಕಾರಣ ನಾನು ನಿಮ್ಮ ಬಳಿಗೆ ಹಿಂತಿರುಗಿ ಬರಲಿಲ್ಲ. ಇದು ಸತ್ಯ. ಇದಕ್ಕೆ ದೇವರೇ ಸಾಕ್ಷಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗೆ ತೊಂದರೆ ಆಗಬಾರದೆಂದೇ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯ ಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.
Kannada BSI Bible 2016
ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ.ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಮೇಲೆ ಕನಿಕರವಿದ್ದದರಿಂದಲೇ ನಾನು ಕೊರಿಂಥಕ್ಕೆ ಬರಬೇಕೆಂಬ ಅಭಿಪ್ರಾಯವನ್ನು ಬಿಟ್ಟುಬಿಟ್ಟೆನೆಂದು ನನ್ನ ಜೀವದಾಣೆ ಹೇಳುತ್ತೇನೆ; ಅದಕ್ಕೆ ದೇವರೇ ಸಾಕ್ಷಿಯಾಗಿರಲಿ.
Kannada Bible (KNCL) BSI 2016
ನಿಮಗೆ ತೊಂದರೆ ಆಗಬಾರದೆಂದು ನಾನು ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮಗೆ ಶ್ರಮೆ ಪಡಿಸಬಾರದೆಂದು ನಾನು ಕೊರಿಂಥಕ್ಕೆ ಹಿಂದಿರುಗಿ ಬರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ.