2 Corinthians 1:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ನಂಬಿಕೆಯನ್ನು ಹತೋಟಿಯಲ್ಲಿಟ್ಟುಕೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆಂದು ನಾನು ಹೇಳುತ್ತಿಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿದ್ದೀರಿ. ಆದರೆ ನಾವು ನಿಮ್ಮ ಸಂತೋಷಕ್ಕಾಗಿ ನಿಮ್ಮ ಜೊತೆಕೆಲಸದವರಾಗಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ನಂಬಿಕೆಯ ವಿಷಯದಲ್ಲಿಯೂ ನಾವು ನಿಮ್ಮ ಮೇಲೆ ದೊರೆತನಮಾಡುವವರೆಂಬುದಾಗಿ ಅಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿರುವಂತೆ ನಿಮ್ಮ ಸಂತೋಷಕ್ಕೆ ನಾವು ಸಹಾಭಾಗಿಗಳಾಗಿದೇವಷ್ಟೇ.
Kannada BSI Bible 2016
ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ನಂಬಿಕೆಯ ವಿಷಯದಲ್ಲಿಯೂ ನಿಮ್ಮ ಮೇಲೆ ದೊರೆತನಮಾಡುವವರೆಂದು ನನ್ನ ತಾತ್ಪರ್ಯವಲ್ಲ; ನಿಮ್ಮ ಸಂತೋಷಕ್ಕೆ ನಾವು ಸಹಾಯಕರಾಗಿದ್ದೇವೆ; ನಂಬಿಕೆಯ ವಿಷಯದಲ್ಲಿ ದೃಢ ನಿಂತಿದ್ದೀರಿ.
Kannada Bible (KNCL) BSI 2016
ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತಿದ್ದೇವೆಂದು ತಿಳಿಯಬೇಡಿ; ವಿಶ್ವಾಸದಲ್ಲಿ ನೀವು ದೃಢರಾಗಿಯೇ ಇದ್ದೀರಿ. ನಿಮ್ಮ ಸಂತೋಷಕ್ಕಾಗಿ ನಾವು ನಿಮ್ಮೊಡನೆ ಸಹಕರಿಸುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತೇವೆಂದು ತಿಳಿಯಬೇಡಿರಿ. ಆದರೆ ನಿಮ್ಮ ಆನಂದಕ್ಕಾಗಿ ಕೆಲಸಮಾಡಿ, ನಾವೂ ಭಾಗಿಗಳಾಗಿರಲು ಬಯಸುತ್ತೇವೆ. ಏಕೆಂದರೆ, ನೀವು ವಿಶ್ವಾಸದಲ್ಲಿ ದೃಢವಾಗಿ ನಿಂತಿದ್ದೀರಲ್ಲ.