2 Corinthians 1:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ವಿಷಯದಲ್ಲಿ ನಮಗೆ ಬಲವಾದ ನಿರೀಕ್ಷೆಯಿದೆ. ನೀವು ನಮ್ಮ ಬಾಧೆಗಳಲ್ಲಿ ಪಾಲುಗಾರರಾಗಿರುವುದರಿಂದ ನಮ್ಮ ಆದರಣೆಯಲ್ಲಿಯೂ ನೀವು ಪಾಲುಗಾರರಾಗುತ್ತೀರಿ ಎಂಬುದು ನನಗೆ ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಬಾಧೆಗಳಲ್ಲಿ ನಮ್ಮೊಂದಿಗೆ ಪಾಲುಗಾರರಾಗಿರುವ ಪ್ರಕಾರವೇ ಆದರಣೆಯೂ ಪಾಲುಗಾರರಾಗಿದ್ದೀರೆಂದು ತಿಳಿದಿರುವುದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.
Kannada BSI Bible 2016
ನೀವು ಬಾಧೆಗಳಲ್ಲಿ ಪಾಲುಗಾರರಾಗಿರುವ ಪ್ರಕಾರ ಆದರಣೆ ಯಲ್ಲಿಯೂ ಪಾಲುಗಾರರಾಗಿದ್ದೀರೆಂದು ನಮಗೆ ತಿಳಿದಿರುವದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಬಾಧೆಗಳಲ್ಲಿ ನಮ್ಮೊಂದಿಗೆ ಪಾಲುಗಾರರಾಗಿರುವ ಪ್ರಕಾರ ಆದರಣೆಯಲ್ಲಿಯೂ ಪಾಲುಗಾರರಾಗಿದ್ದೀರೆಂದು ನಮಗೆ ತಿಳಿದಿರುವದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.
Kannada Bible (KNCL) BSI 2016
ನಿಮ್ಮಲ್ಲಿ ನಮಗೆ ಅಚಲವಾದ ಭರವಸೆಯಿದೆ. ಏಕೆಂದರೆ, ನಮ್ಮ ಯಾತನೆಗಳಲ್ಲಿ ನೀವು ಪಾಲುಗೊಳ್ಳುವಂತೆ ನಾವು ಪಡೆಯುವ ಸಾಂತ್ವನದಲ್ಲಿಯೂ ನೀವು ಸಹಭಾಗಿಗಳಾಗಿದ್ದೀರಿ, ಎಂಬುದು ನಮಗೆ ಗೊತ್ತಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮಗಾಗಿರುವ ನಮ್ಮ ನಿರೀಕ್ಷೆಯು ಸ್ಥಿರವಾಗಿದೆ. ಏಕೆಂದರೆ, ನಮ್ಮ ಕಷ್ಟಸಂಕಟಗಳಲ್ಲಿ ನೀವು ಪಾಲುಗಾರರಾಗಿದ್ದಂತೆಯೇ, ನಮ್ಮ ಸಂತೈಸುವಿಕೆಗಳಲ್ಲಿಯೂ ನೀವು ನಮ್ಮೊಂದಿಗೆ ಪಾಲುಗಾರರಾಗಿದ್ದೀರಿ ಎಂದು ನಮಗೆ ಗೊತ್ತಿದೆ.