2 Corinthians 1:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಹೋದರ ಸಹೋದರಿಯರೇ, ನಾವು ಏಷ್ಯಾ ಪ್ರಾಂತ್ಯದಲ್ಲಿ ಅನುಭವಿಸಿದ ಸಂಕಟದ ಬಗ್ಗೆ ನೀವು ತಿಳಿದುಕೊಳ್ಳಬೇಕೆಂದು ನಾವು ಅಪೇಕ್ಷಿಸುತ್ತೇವೆ. ಅಲ್ಲಿ ನಮಗೆ ಅಪಾರವಾದ ಭಾರಗಳಿದ್ದವು. ಆ ಭಾರಗಳು ನಮ್ಮ ಸ್ವಂತ ಶಕ್ತಿಗಿಂತಲೂ ಅಧಿಕವಾಗಿದ್ದವು. ಜೀವಸಹಿತ ಉಳಿಯುತ್ತೇವೆ ಎಂಬ ನಿರೀಕ್ಷೆಯನ್ನು ಸಹ ನಾವು ಬಿಟ್ಟುಕೊಟ್ಟೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ಆಸ್ಯ ಸೀಮೆಯಲ್ಲಿ ನಾವು ಅನುಭವಿಸಿದ ಕಷ್ಟ-ಸಂಕಟಗಳು ನಿಮಗೆ ತಿಳಿದಿರಲಿ ಎಂದು ನಾನು ಬಯಸುತ್ತೇನೆ. ಅಲ್ಲಿ ನಮ್ಮ ಶಕ್ತಿಗೆ ಮೀರಿದಂಥ ತೊಂದರೆಗಳನ್ನು ಅನುಭವಿಸಿ ನಾವು ಕುಗ್ಗಿಹೋಗಿ ಬದುಕುವ ನಿರೀಕ್ಷೆಯೇ ಇಲ್ಲವಾದವು.
Kannada BSI Bible 2016
ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ಆಸ್ಯ ಸೀಮೆಯಲ್ಲಿ ನಮಗೆ ಸಂಭವಿಸಿದ ಸಂಕಟವನ್ನು ಕುರಿತು ವಿಚಾರಿಸುತ್ತೀರೋ ಅದರಲ್ಲಿ ನಾವು ಬಲವನ್ನು ಮೀರಿದಂಥ ಅತ್ಯಧಿಕವಾದ ಭಾರದಿಂದ ಕುಗ್ಗಿಹೋಗಿ ಜೀವವುಳಿಯುವ ಮಾರ್ಗವನ್ನು ಕಾಣದವರಾದೆವೆಂಬದನ್ನು ನೀವು ತಿಳಿಯಬೇಕೆಂದು ಅಪೇಕ್ಷಿಸುತ್ತೇನೆ.
Kannada Bible (KNCL) BSI 2016
ಸಹೋದರರೇ, ಏಷ್ಯಾ ಪ್ರಾಂತ್ಯದಲ್ಲಿ ನಮಗೊದಗಿದ ಹಿಂಸೆಬಾಧೆಗಳು ನಿಮಗೆ ತಿಳಿದಿವೆಯಷ್ಟೆ. ಅಲ್ಲಿ ಸಹಿಸಲಸಾಧ್ಯವಾದಷ್ಟು ಸಂಕಟವನ್ನು ಅನುಭವಿಸಬೇಕಾಯಿತು. ನಾವು ಬದುಕುವ ಆಶೆಯನ್ನೇ ಬಿಡಬೇಕಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನಾವು ಏಷ್ಯಾ ಪ್ರಾಂತದಲ್ಲಿ ಅನುಭವಿಸಿದ ಕಷ್ಟ ಸಂಕಟಗಳ ಬಗ್ಗೆ ನೀವು ತಿಳಿಯಬೇಕೆಂದು ಬಯಸುತ್ತೇವೆ. ನಾವು ಸಹಿಸುವುದಕ್ಕೆ ಬಹುಕಷ್ಟಕರವಾದ ಒತ್ತಡಗಳು ನಮಗೆ ಬಂದೊದಗಿದಾಗ, ಅವು ನಮ್ಮ ಪ್ರಾಣಕ್ಕೂ ಅಪಾಯಕಾರಿ ಎಂದೆನಿಸಿತು.