2 Corinthians 1:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಜವಾಗಿಯೂ ನಾವು ಸಾಯುತ್ತೇವೆಂದು ನಮ್ಮ ಹೃದಯಗಳಲ್ಲಿ ನಂಬಿಕೊಂಡೆವು. ನಾವು ನಮ್ಮಲ್ಲಿ ಭರವಸೆ ಇಡದಂತೆಯೂ ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವ ದೇವರಲ್ಲಿ ಭರವಸೆ ಇಡಬೇಕೆಂತಲೂ ಇದಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಾಯುವುದು ನಿಶ್ಚಯವೆಂದೆನಿಸಿದಾಗ ನಾವು ನಮ್ಮ ಮೇಲೆ ಭರವಸವನ್ನಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.
Kannada BSI Bible 2016
ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರಣವಾಗುತ್ತದೆಂಬ ನಿಶ್ಚಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಹೀಗಾಯಿತು.
Kannada Bible (KNCL) BSI 2016
ನಿಜವಾಗಿಯೂ ನಮಗೆ ಮರಣದಂಡನೆ ವಿಧಿಸಲಾಗಿದೆಯೆಂದು ಭಾವಿಸಿದೆವು. ಇದರಿಂದ ನಾವು ನಮ್ಮ ಸ್ವಂತ ಶಕ್ತಿಯನ್ನೇ ನಂಬಿಕೊಳ್ಳದೆ, ಸತ್ತವರನ್ನು ಪುನರುತ್ಥಾನಗೊಳಿಸುವ ದೇವರಲ್ಲಿ ಭರವಸೆಯಿಡುವಂತೆ ಹೀಗಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರಣದ ಶಿಕ್ಷೆಯನ್ನು ನಾವು ಅನುಭವಿಸುತ್ತೇವೋ ಎಂಬಂತೆ ನಮಗಾಯಿತು. ನಾವು ನಮ್ಮ ಮೇಲೆ ಭರವಸೆಯಿಡದೆ, ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸೆ ಇಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.