2 Corinthians 10:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ಬಹಳವಾಗಿ ಹೊಗಳಿಕೊಳ್ಳುವುದಿಲ್ಲ. ನಾವು ನಿಮ್ಮಲ್ಲಿಗೆ ಈಗಾಗಲೇ ಬಂದಿಲ್ಲದಿದ್ದರೆ ಬಹಳವಾಗಿ ಹೊಗಳಿಕೊಳ್ಳುತ್ತಿದ್ದೆವು. ಆದರೆ ನಾವು ನಿಮ್ಮಲ್ಲಿಗೆ ಬಂದಿದ್ದೇವೆ. ಕ್ರಿಸ್ತನ ಸುವಾರ್ತೆಯೊಂದಿಗೆ ನಾವು ಬಂದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ಇತರರಿಗಿಂತ ಮೊದಲು ನಿಮ್ಮ ಬಳಿಗೆ ಬಂದದ್ದರಿಂದ ನಿಮ್ಮ ಮೇಲೆ ಅಧಿಕಾರವಿಲ್ಲದವರಂತೆ ಮೇರೆಯನ್ನು ಅತಿಕ್ರಮಿಸಿಹೋಗುತ್ತಿಲ್ಲ.
Kannada BSI Bible 2016
ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ನಿಮ್ಮ ಬಳಿಗೆ ಬಂದ ನಾವು ನಿಮ್ಮನ್ನು ತಲುಪಲಿಲ್ಲವೋ ಎಂಬಂತೆ ಮೇರೆಯನ್ನು ಅತಿಕ್ರಮಿಸಿದವರಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ಇತರರಿಗಿಂತ ಮೊದಲು ನಿಮ್ಮ ಬಳಿಗೆ ಬಂದದರಿಂದ ನಿಮ್ಮ ಮೇಲೆ ಅಧಿಕಾರವಿಲ್ಲದವರಂತೆ ಮೇರೆಯನ್ನು ಅತಿಕ್ರವಿುಸಿದವರಲ್ಲ.
Kannada Bible (KNCL) BSI 2016
ಇತರರಿಗಿಂತಲೂ ಮೊದಲೇ ನಿಮಗೆ ಯೇಸುಕ್ರಿಸ್ತರ ಶುಭಸಂದೇಶವನ್ನು ತಂದವರು ನಾವು. ಹೀಗಿರುವಲ್ಲಿ ನಿಮ್ಮ ವಿಷಯದಲ್ಲಿ ನಾವು ಈಗ ಹೊಗಳಿಕೊಳ್ಳುವಾಗ ನಮ್ಮ ಸರಹದ್ದನ್ನು ಉಲ್ಲಂಘಿಸುತ್ತಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಮೊದಲು ನಿಮ್ಮ ಬಳಿಗೆ ಬಾರದಿದ್ದರೆ, ನಮ್ಮ ಹೊಗಳಿಕೊಳ್ಳುವಿಕೆಯು ಮೇರೆಯನ್ನು ಉಲ್ಲಂಘಿಸುವುದಾಗಿರುತ್ತಿತ್ತು; ಆದರೆ ನಾವು ನಿಮಗೆ ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದಕ್ಕಾಗಿ ನಿಮ್ಮ ಬಳಿಗೆ ಬಂದೇವಲ್ಲಾ.