2 Corinthians 10:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಲೌಕಿಕರಂತೆ ಜೀವಿಸುತ್ತೇವೆಂದು ಕೆಲವರು ಯೋಚಿಸುತ್ತಾರೆ. ನಾನು ಬಂದಾಗ ಅವರ ವಿರೋಧವಾಗಿ ಬಹು ದಿಟ್ಟತನದಿಂದಿರಬೇಕೆಂದು ಯೋಚಿಸಿಕೊಂಡಿದ್ದೇನೆ. ಆದರೆ ನಿಮಗೂ ಅದೇ ದಿಟ್ಟತನವನ್ನು ಉಪಯೋಗಿಸುವ ಅಗತ್ಯತೆ ಇಲ್ಲದಿರಲಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರು ನಮ್ಮನ್ನು ಲೋಕ ರೀತಿಯಾಗಿ ಜೀವಿಸುವವರೆಂದು ಎಣಿಸುತ್ತಾರೋ ಅವರೊಂದಿಗೆ ದಿಟ್ಟತನದಿಂದಲೇ ಇರಬೇಕೆಂದು ಅಂದುಕೊಂಡಿದೇನೆ. ನಾವು ನಿಮ್ಮೊಂದಿಗಿರುವಾಗ ಅಂಥ ದಿಟ್ಟತನವನ್ನು ತೋರಿಸುವುದಕ್ಕೆ ಅವಕಾಶವುಂಟಾಗಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
Kannada BSI Bible 2016
ಯಾರು ನಮ್ಮನ್ನು ಶರೀರಾ ನುಸಾರವಾಗಿ ಎಣಿಸುತ್ತಾರೋ ಅವರಿಗೆ ದಿಟ್ಟತನವನ್ನು ತೋರಿಸಬೇಕೆಂದು ನಾನು ಯೋಚಿಸುತ್ತಾ ಇದ್ದೇನೆ: ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶವಾಗಬಾರದೆಂದು ನಿಮ್ಮನು ಬೇಡಿಕೊಳ್ಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರು ನಮ್ಮನ್ನು ಲೋಕಾನುಸಾರಿಗಳೆಂದು ಎಣಿಸುತ್ತಾರೋ ಅವರಿಗೆ ದಿಟ್ಟವಾದ ಧೈರ್ಯವನ್ನು ತೋರಿಸಬೇಕೆಂದು ಯೋಚಿಸುತ್ತಾ ಇದ್ದೇನೆ. ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶ ಉಂಟಾಗಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
Kannada Bible (KNCL) BSI 2016
ನಾನು ನಿಮ್ಮ ಬಳಿಗೆ ಬಂದಾಗ, ಕಠಿಣನಾಗಿ ವರ್ತಿಸಲು ಅವಕಾಶ ಕೊಡಬೇಡಿ. ನಾವು ಪ್ರಾಪಂಚಿಕ ರೀತಿನೀತಿಗಳಿಗೆ ಅನುಗುಣವಾಗಿ ನಡೆಯುತ್ತಿದ್ದೇವೆಂದು ದೂಷಿಸುವವರ ವಿರುದ್ಧ ಖಂಡಿತವಾಗಿಯೂ ಕಠಿಣನಾಗಿಯೇ ವರ್ತಿಸಬೇಕೆಂದಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮ ಬಳಿಗೆ ಬಂದಾಗ, ಕಠಿಣವಾಗಿ ವರ್ತಿಸಲು ನನಗೆ ಅವಕಾಶಕೊಡಬೇಡಿರಿ. ಏಕೆಂದರೆ ನಾವು ಪ್ರಾಪಂಚಿಕ ರೀತಿಗನುಸಾರವಾಗಿ ನಡೆಯುತ್ತಿದ್ದೇವೆಂದು ಆಕ್ಷೇಪಿಸುವ ಕೆಲವರ ವಿರುದ್ಧ ಖಂಡಿತವಾಗಿಯು ಕಠಿಣನಾಗಿಯೇ ವರ್ತಿಸಬೇಕೆಂದಿದ್ದೇನೆ.