2 Corinthians 10:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಭುವು ನಮಗೆ ಕೊಟ್ಟಿರುವ ಅಧಿಕಾರದ ಬಗ್ಗೆ ನಾವು ಹೆಚ್ಚು ಹೆಮ್ಮೆಪಡುತ್ತೇವೆ ಎಂಬುದೇನೋ ಸತ್ಯ. ಆದರೆ ಆತನು ನಮಗೆ ಈ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಬಲಪಡಿಸುವುದಕ್ಕಾಗಿಯೇ ಹೊರತು ನಿಮಗೆ ನೋವನ್ನು ಉಂಟುಮಾಡುವುದಕ್ಕಾಗಿಯಲ್ಲ. ಆದ್ದರಿಂದ ಅದರ ಬಗ್ಗೆ ಹೆಮ್ಮೆಪಡುವುದರಲ್ಲಿ ನಾನು ನಾಚಿಕೊಳ್ಳುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾಚಿಕೆಪಡಬೇಕಾಗಿರುವುದಿಲ್ಲ. ಆದರೆ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಕಟ್ಟುವುದಕ್ಕಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟಿರುವವನು.
Kannada BSI Bible 2016
ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾಚಿಕೆಪಡುವದಕ್ಕೆ ಕಾರಣವಾಗುವದಿಲ್ಲ. ಆದರೆ ನಿಮ್ಮನ್ನು ಕೆಡವಿಹಾಕುವದಕ್ಕಲ್ಲ ಕಟ್ಟುವದಕ್ಕಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.
Kannada Bible (KNCL) BSI 2016
ಪ್ರಭು ನಮಗೆ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಕೆಡವಿ ಹಾಳುಮಾಡುವುದಕ್ಕಲ್ಲ, ಕಟ್ಟಿ ಎಬ್ಬಿಸುವುದಕ್ಕಾಗಿ. ಈ ಅಧಿಕಾರವನ್ನು ಕುರಿತು ಒಂದು ವೇಳೆ, ನಾವು ಕೊಂಚ ಹೆಚ್ಚಾಗಿ ಹೊಗಳಿಕೊಂಡಿದ್ದರೂ ಅದಕ್ಕಾಗಿ ಸಂಕೋಚಪಡುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮನ್ನು ಕೆಡವಿ ಹಾಕುವುದಕ್ಕಲ್ಲ. ನಿಮ್ಮ ಭಕ್ತಿವೃದ್ಧಿಮಾಡಲಿಕ್ಕೆ ಕರ್ತ ಯೇಸು ನಮಗೆ ಅಧಿಕಾರವನ್ನು ಕೊಟ್ಟಿದ್ದಾರೆ. ಈ ಅಧಿಕಾರದ ಬಗ್ಗೆ ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾನು ನಾಚಿಕೆಪಡುವುದಿಲ್ಲ.