2 Corinthians 11:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ನಾನು ಮಾಡುತ್ತಿರುವುದನ್ನು ಮುಂದುವರೆಸುತ್ತೇನೆ. ಆ ಜನರಿಗೆ ಹೊಗಳಿಕೊಳ್ಳಲು ಯಾವ ಕಾರಣವೂ ಸಿಕ್ಕಬಾರದೆಂದು ಇದನ್ನು ಮುಂದುವರಿಸುತ್ತೇನೆ. ಅವರು ತಮ್ಮ ಕೆಲಸದ ಬಗ್ಗೆ ಜಂಬಪಡುತ್ತಾರೆ. ತಾವು ಮಾಡುವ ಆ ಕೆಲಸವು ನಮ್ಮ ಕೆಲಸದಂತೆಯೇ ಇದೆಯೆಂದು ಹೇಳಿಕೊಳ್ಳಲು ಬಯಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಅಪೊಸ್ತಲರಾಗಿ ಮಾಡುತ್ತಿರುವ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.
Kannada BSI Bible 2016
ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು; ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು. ಅವರು ಯಾವದರಲ್ಲಿ ಹಿಗ್ಗುತ್ತಾರೋ ಅದರಲ್ಲಿ ನಮ್ಮಂತೆಯೇ ನಡೆಯುವವರಾಗಿ ಕಂಡು ಬರಲಿ.
Kannada Bible (KNCL) BSI 2016
ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಮಾಡುತ್ತಿರುವ ಪ್ರೇಷಿತರ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಅವರಿಗೆ ಅಂಥ ಆಸ್ಪದವನ್ನು ಕೊಡದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಾವು ಮಾಡುವ ಕಾರ್ಯಗಳ ಬಗ್ಗೆ ನಮ್ಮೊಂದಿಗೆ ಸರಿಸಮಾನವೆಂದು ಹೊಗಳಿಕೊಳ್ಳಲು ಅವಕಾಶವನ್ನು ಹುಡುಕುವವರಿಗೆ, ಯಾವ ಆಸ್ಪದವೂ ಸಿಗದಂತೆ ನಾನು ಮಾಡುತ್ತಿರುವುದನ್ನು ನಿಲ್ಲಿಸದೆ, ಇನ್ನು ಮುಂದೆಯೂ ಮಾಡುತ್ತಿರುವೆನು.