2 Corinthians 11:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗಿರಲು ಸೈತಾನನ ಸೇವಕರು ತಾವು ಸರಿಯಾದ ಕೆಲಸವನ್ನು ಮಾಡುತ್ತಿರುವವರಂತೆ ನಟಿಸುವುದರಲ್ಲಿ ಆಶ್ಚರ್ಯವೇನೂ ಇಲ್ಲ. ಆದರೆ ಅವರು ಮಾಡುತ್ತಿರುವ ಕೆಲಸಗಳ ಪ್ರತಿಫಲವಾಗಿ ಅವರಿಗೆ ಕೊನೆಯಲ್ಲಿ ದಂಡನೆಯಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಸೇವಕರೂ ಸಹ ನೀತಿಗೆ ಸೇವಕರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವುದು ಆಶ್ಚರ್ಯವೇನಲ್ಲ. ಅವರ ಅಂತ್ಯಾವಸ್ಥೆಯು ಅವರ ಕೃತ್ಯಗಳಿಗೆ ತಕ್ಕಂತೆಯೇ ಇರುವುದು.
Kannada BSI Bible 2016
ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸುವದಕ್ಕೆ ವೇಷಹಾಕಿಕೊಳ್ಳುವದು ದೊಡ್ಡದಲ್ಲ. ಅವರ ಅಂತ್ಯಾವಸ್ಥೆಯು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
Kannada Bible (KNCL) BSI 2016
ಹೀಗಿರುವಲ್ಲಿ, ಅವನ ಸೇವಕರೂ ಸಹ ಸತ್ಯಸೇವಕರಂತೆ ವೇಷಧಾರಿಗಳಾದರೆ ಅದರಲ್ಲೇನು ಸೋಜಿಗ? ಅವರ ಕೃತ್ಯಗಳಂತೆಯೇ ಅವರ ಅಂತ್ಯವೂ ಇರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಸೈತಾನನ ಸೇವಕರೂ ನೀತಿಯ ಸೇವಕರಂತೆ ಕಾಣಿಸಿಕೊಳ್ಳುವುದಕ್ಕೆ ತಮ್ಮನ್ನು ಮಾರ್ಪಡಿಸಿಕೊಳ್ಳುವುದು ಆಶ್ಚರ್ಯವೇನೂ ಅಲ್ಲ. ಅವರ ಕೃತ್ಯಗಳಿಗೆ ತಕ್ಕಂತೆ ಅವರಿಗೆ ಅಂತ್ಯವೂ ಇರುವುದು.