2 Corinthians 11:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ಈ ಚಿಂತೆಯು ದೇವರಿಂದ ಬಂದದ್ದು. ನಿಮ್ಮನ್ನು ಕ್ರಿಸ್ತನಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಕ್ರಿಸ್ತನೊಬ್ಬನೇ ನಿಮ್ಮ ಪತಿಯಾಗಿರಬೇಕು. ನಾನು ನಿಮ್ಮನ್ನು ಕ್ರಿಸ್ತನಿಗೆ ಆತನ ಶುದ್ಧ ವಧುವನ್ನಾಗಿ ಕೊಡಲು ಅಪೇಕ್ಷಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿಸಿದ್ದೇನಲ್ಲ.
Kannada BSI Bible 2016
ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಂತೆ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿದೆನಲ್ಲಾ.
Kannada Bible (KNCL) BSI 2016
ನಿಮ್ಮ ಬಗ್ಗೆ ದೇವರಿಗಿರುವ ಪ್ರೇಮಾಸೂಯೆ ನನಗೂ ಇದೆ. ನಿಷ್ಕಳಂಕ ಕನ್ನಿಕೆಯೊಬ್ಬಳನ್ನು ಅವಳ ಏಕೈಕ ವರನಿಗೆ ನಿಶ್ಚಯಿಸುವ ರೀತಿಯಲ್ಲಿ ನಾನು ಕ್ರಿಸ್ತಯೇಸುವೆಂಬ ಏಕೈಕ ಪುರುಷನಿಗೆ ನಿಮ್ಮನ್ನು ನಿಶ್ಚಯಮಾಡಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ನಿಮ್ಮ ವಿಷಯದಲ್ಲಿ ಅಸೂಯೆಪಡುವಂತೆ, ನಾನು ನಿಮ್ಮ ವಿಷಯದಲ್ಲಿ ಅಸೂಯೆಪಡುತ್ತಿದ್ದೇನೆ. ಹೇಗೆಂದರೆ, ನಿಮ್ಮನ್ನು ಶುದ್ಧ ಕನ್ನಿಕೆಯಾಗಿ ಕ್ರಿಸ್ತ ಯೇಸು ಎಂಬ ಒಬ್ಬರೇ ಪುರುಷನಿಗೆ ಒಪ್ಪಿಸಬೇಕೆಂದು ಆತನೊಂದಿಗೆ ನಾನು ನಿಶ್ಚಯ ಮಾಡಿದ್ದೆನಲ್ಲಾ.