2 Corinthians 11:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಕೆಂದರೆ ನಿಮ್ಮಿಂದ ಬಲವಂತವಾಗಿ ಕೆಲಸ ಮಾಡಿಸಿಕೊಳ್ಳುವವನ ಮತ್ತು ನಿಮ್ಮನ್ನು ಉಪಯೋಗಿಸಿಕೊಳ್ಳುವವನ ವಿಷಯದಲ್ಲಿಯೂ ಸಹ ತಾಳ್ಮೆಯಿಂದಿರುತ್ತೀರಿ. ನಿಮ್ಮನ್ನು ಮೋಸಗೊಳಿಸುವವರ, ತಮ್ಮನ್ನು ನಿಮಗಿಂಥ ಉತ್ತಮರೆಂದು ಭಾವಿಸಿಕೊಂಡಿರುವವರ ಮತ್ತು ನಿಮ್ಮ ಮುಖದ ಮೇಲೆ ಹೊಡೆಯುವವರ ವಿಷಯದಲ್ಲಿಯೂ ನೀವು ತಾಳ್ಮೆಯಿಂದಿರುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ, ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ, ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ, ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ, ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ.
Kannada BSI Bible 2016
ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿ ಬಿಟ್ಟರೂ ಒಬ್ಬನು ನಿಮ್ಮನ್ನು ಮರುಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ನೀವು ಸಹಿಸಿಕೊಳ್ಳುತ್ತೀರಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ.
Kannada Bible (KNCL) BSI 2016
ಯಾರಾದರೂ ನಿಮ್ಮನ್ನು ಅಧೀನಪಡಿಸಿಕೊಂಡರೂ ಕಬಳಿಸಿದರೂ ಮರುಳುಗೊಳಿಸಿದರೂ ತುಚ್ಛೀಕರಿಸಿದರೂ ಕೆನ್ನೆಗೆ ಬಿಗಿದರೂ ಎಲ್ಲವನ್ನೂ ಸಹಿಸಿಕೊಳ್ಳುತ್ತೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಜವಾಗಿ ಹೇಳಬೇಕಾದರೆ, ಯಾರಾದರೂ ನಿಮ್ಮನ್ನು ಗುಲಾಮರನ್ನಾಗಿ ಮಾಡಿಕೊಂಡರೂ, ನಿಮ್ಮನ್ನು ಮರುಳುಗೊಳಿಸಿದರೂ, ತಮ್ಮ ಸ್ವಂತ ಪ್ರಯೋಜನಕ್ಕಾಗಿ ಬಳಸಿಕೊಂಡರೂ, ನಿಮ್ಮ ಕೆನ್ನೆಗೆ ಬಾರಿಸಿದರೂ, ನೀವು ಸಹಿಸಿಕೊಳ್ಳುತ್ತೀರಲ್ಲಾ.