2 Corinthians 11:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದನ್ನು ಹೇಳುವುದಕ್ಕೇ ನಾಚಿಕೆಯಾಗುತ್ತದೆ. ಆದರೆ, ನಿಮ್ಮೊಂದಿಗೆ ಆ ರೀತಿ ನಡೆದುಕೊಳ್ಳುವಷ್ಟು “ಬಲ” ನಮಗಿರಲಿಲ್ಲ! ಆದರೆ ಹೊಗಳಿಕೊಳ್ಳಲು ಯಾರಿಗಾದರೂ ಸಾಕಷ್ಟು ಧೈರ್ಯವಿದ್ದರೆ ನಾನು ಸಹ ಧೈರ್ಯದಿಂದ ಹೊಗಳಿಕೊಳ್ಳುತ್ತೇನೆ. (ನಾನು ಬದ್ಧಿಹೀನನಂತೆ ಮಾತಾಡುತ್ತಿದ್ದೇನೆ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಬಲವಿಲ್ಲದವರಾಗಿದ್ದೆವೆಂಬುದನ್ನು ನಾಚಿಕೆಗೇಡಿನಿಂದ ಹೇಳುತ್ತಿದ್ದೇನೆ. ಯಾವ ಆಧಾರದಿಂದ ಯಾವನಾದರೂ ದೊಡ್ಡಸ್ತಿಕೆಯಿಂದ ಹೊಗಳಿಕೊಳ್ಳುತ್ತಾನೋ ಅದರಿಂದಲೇ ನಾನು ಹೊಗಳಿಕೊಳ್ಳುವುದಾಗಿ ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ.
Kannada BSI Bible 2016
ನಾವು ಬಲವಿಲ್ಲದವರೋ ಎಂಬಂತೆ ಅವ ಮಾನದ ವಿಷಯವಾಗಿ ನಾನು ಮಾತನಾಡುತ್ತೇನೆ. ಹೇಗಿದ್ದರೂ ಯಾವನಾದರೂ ಧೈರ್ಯವುಳ್ಳವ ನಾಗಿದ್ದರೆ (ನಾನು ಬುದ್ಧಿಹೀನನಂತೆ ಮಾತ ನಾಡುತ್ತೇನೆ) ನಾನು ಸಹ ಧೈರ್ಯವುಳ್ಳವನಾಗಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಬಲವಿಲ್ಲದವರಾಗಿದ್ದೆವೆಂಬಂತೆ ಇದನ್ನು ನನ್ನ ಅವಮಾನಕ್ಕೆ ಹೇಳಿದ್ದರೂ ಯಾವ ಆಧಾರದಿಂದ ಯಾವನಾದರೂ ಧೈರ್ಯವಾಗಿ ನಡಕೊಳ್ಳುತ್ತಾನೋ ಅದರಿಂದಲೇ ನಾನೂ ಧೈರ್ಯವುಳ್ಳವನಾಗಿದ್ದೇನೆ.
Kannada Bible (KNCL) BSI 2016
ಇದನ್ನೆಲ್ಲಾ ಮಾಡುವ ಸಾಹಸ ನಮಗಿಲ್ಲವೆಂದು ಹೇಳಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ. ಯಾರಿಗಾದರೂ ಯಾರ ವಿಷಯದಲ್ಲಾದರೂ ಹೊಗಳಿಕೊಳ್ಳುವ ಧೈರ್ಯವಿದ್ದರೆ ಅದಕ್ಕಿಂತ ಹೆಚ್ಚಿನ ಧೈರ್ಯ ನನಗಿದೆ. ಇದನ್ನು ನಾನು ಹುಚ್ಚನಂತೆಯೇ ಹೇಳುತ್ತಿದ್ದೇನೆ ಎಂದು ಭಾವಿಸಿಕೊಳ್ಳಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಲ್ಲಾ ಮಾಡಲು ಬಹಳ ಬಲಹೀನರಾದ ನಮಗೆ ಸಾಧ್ಯವಿಲ್ಲ ಎಂದು ಒಪ್ಪಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ! ಯಾವುದನ್ನು ಇತರರು ಹೊಗಳಿಕೊಳ್ಳುವುದಕ್ಕೆ ಧೈರ್ಯ ಮಾಡುತ್ತಾರೋ, ಅದನ್ನು ನಾನು ಬುದ್ಧಿಹೀನನಂತೆ ಹೊಗಳುವ ಧೈರ್ಯ ಮಾಡುತ್ತೇನೆ.