2 Corinthians 11:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೂರು ಸಲ ಕಬ್ಬಿಣದ ಸರಳುಗಳಿಂದ ಏಟನ್ನು ತಿಂದಿದ್ದೇನೆ. ಒಂದು ಸಲ ಕಲ್ಲೆಸೆದು ನನ್ನನ್ನು ಅರೆಜೀವ ಮಾಡಿದರು. ಮೂರು ಸಲ ನಾನಿದ್ದ ಹಡಗುಗಳು ಒಡೆದುಹೋದವು. ಒಮ್ಮೆ, ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿರಬೇಕಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂರು ಸಾರಿ ಬಾರುಕೋಲಿನಿಂದ ನನ್ನನ್ನು ಹೊಡೆದರು. ಒಂದು ಸಾರಿ ಜನರು ನನ್ನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು. ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು. ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು.
Kannada BSI Bible 2016
ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂರು ಸಾರಿ ಸರಕಾರದವರು ಚಡಿಗಳಿಂದ ನನ್ನನ್ನು ಹೊಡಿಸಿದರು; ಒಂದು ಸಾರಿ ಜನರು ನನ್ನನ್ನು ಕೊಲ್ಲುವದಕ್ಕೆ ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು.
Kannada Bible (KNCL) BSI 2016
ಮೂರು ಸಾರಿ ರೋಮನರು ನನ್ನನ್ನು ಛಡಿಗಳಿಂದ ಹೊಡೆಸಿದರು. ಒಮ್ಮೆ ಜನರು ನನ್ನನ್ನು ಕೊಲ್ಲಲೆಂದು ಕಲ್ಲು ತೂರಿದರು. ಮೂರು ಸಲ ನಾನಿದ್ದ ಹಡಗು ಒಡೆದು ನೀರುಪಾಲಾಯಿತು. ಒಂದು ರಾತ್ರಿ, ಒಂದು ಹಗಲು ನಡುಗಡಲಲ್ಲಿ ತೇಲಾಡಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂರು ಸಾರಿ ದೊಣ್ಣೆಯಿಂದ ಬಡಿಸಿಕೊಂಡಿದ್ದೇನೆ. ಒಂದು ಸಾರಿ ಕಲ್ಲೆಸೆದು ನನ್ನನ್ನು ಕೊಲ್ಲಲು ನೋಡಿದರು. ಮೂರು ಬಾರಿ ನಾನು ಪ್ರಯಾಣಿಸುತ್ತಿದ್ದ ಹಡಗು ಒಡೆದು ನೀರು ಪಾಲಾಯಿತು. ಒಂದು ಇಡೀ ಹಗಲುರಾತ್ರಿ ನಾನು ಸಮುದ್ರದ ಮೇಲೆ ತೇಲಿದೆನು.