2 Corinthians 11:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ನಾನು ಇನ್ನೂ ಅನೇಕ ಸಮಸ್ಯೆಗಳನ್ನು ಎದುರಿಸಿದ್ದೇನೆ. ಎಲ್ಲಾ ಸಭೆಗಳ ಮೇಲೆ ನನಗಿರುವ ಚಿಂತೆಯೂ ಇವುಗಳಲ್ಲಿ ಒಂದು. ನಾನು ಪ್ರತಿನಿತ್ಯ ಅವುಗಳ ಬಗ್ಗೆ ಚಿಂತಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಂಥ ಇನ್ನಿತರ ಬೇರೆ ಸಂಗತಿಗಳಲ್ಲದೆ, ಎಲ್ಲಾ ಸಭೆಗಳ ಕುರಿತಾದ ಚಿಂತೆಯು ದಿನದಿನ ನನ್ನನ್ನು ಕಾಡಿಸುತ್ತಿತ್ತು.
Kannada BSI Bible 2016
ಇನ್ನೂ ಬೇರೆ ಹೊರಗಿನವುಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯನ್ನು ಪ್ರತಿ ದಿನವೂ ನಾನು ಹೊರುತ್ತಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನೂ ಬೇರೆ ಸಂಗತಿಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯು ದಿನದಿನ ನನ್ನನ್ನು ಪೀಡಿಸುತ್ತದೆ.
Kannada Bible (KNCL) BSI 2016
ಇಂಥ ಇನ್ನಿತರ ಕಷ್ಟಸಂಕಟಗಳನ್ನು ಅನುಭವಿಸಿದ್ದೇನೆ. ಅಷ್ಟೇ ಅಲ್ಲದೆ, ಎಲ್ಲ ಸಭೆಗಳ ಹಿತಚಿಂತನೆಯೂ ನನ್ನನ್ನು ಅನುದಿನವೂ ಕಾಡಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಷ್ಟೇ ಅಲ್ಲ, ಎಲ್ಲಾ ಸಭೆಗಳ ಮೇಲಿರುವ ಚಿಂತೆಯು ನನ್ನನ್ನು ದಿನನಿತ್ಯವೂ ಬಾಧಿಸುತ್ತಿದೆ.