2 Corinthians 11:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾವನಾದರೂ ಬಲಹೀನನಾಗಿರುವಾಗ ನಾನೂ ಬಲಹೀನನಾಗಿರುತ್ತೇನೆ. ಯಾವನಾದರೂ ಪಾಪದಲ್ಲಿ ನಡೆಸಲ್ಪಟ್ಟರೆ ನನ್ನೊಳಗೆ ಕೋಪಗೊಳ್ಳುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ಬಲಹೀನನಾಗಿದ್ದರೆ ನಾನೂ ಅವನೊಂದಿಗೆ ಬಲಹೀನನಾಗದೆ ಇದ್ದೆನೋ? ಯಾವನಾದರೂ ತಪ್ಪಿಹೋಗಿದ್ದಲ್ಲಿ ನಾನು ಸಂತಾಪಪಡದೆ ಇದ್ದೆನೋ?
Kannada BSI Bible 2016
ಯಾರಾದರೂ ಬಲವಿಲ್ಲದವನಾದರೆ ನಾನು ಬಲವಿಲ್ಲದವನಾಗದೆ ಇರುವೆನೋ? ಯಾರಾದರೂ ಮುಗ್ಗರಿಸಿದರೆ ನಾನು ತಾಪಪಡದೆ ಇರುವೆನೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಬಲವಿಲ್ಲದವನಾದರೆ ನಾನು ಅವನೊಂದಿಗೆ ಬಲವಿಲ್ಲದವನಾಗದೆ ಇರುವೆನೋ? ಯಾವನಾದರೂ ಪಾಪದಲ್ಲಿ ಸಿಕ್ಕಿಕೊಂಡರೆ ನಾನು ತಾಪಪಡುವದಿಲ್ಲವೋ?
Kannada Bible (KNCL) BSI 2016
ಒಬ್ಬನು ಬಲಹೀನನಾಗಿದ್ದರೆ, ಅವನೊಡನೆ ನಾನೂ ಬಲಹೀನನೇ. ಒಬ್ಬನು ಪಾಪಕ್ಕೆ ಬಲಿಯಾದರೆ ನಾನೂ ತಾಪದಿಂದ ಕುದಿಯುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿ ಯಾರಾದರೂ ಬಲಹೀನರಾಗಿದ್ದರೆ, ನಾನೂ ಬಲಹೀನನಾಗಿರುವುದಿಲ್ಲವೋ? ನಿಮ್ಮಲ್ಲಿ ಯಾವನಾದರೂ ಪಾಪದಲ್ಲಿ ಬಿದ್ದುಹೋದರೆ, ನಾನು ನೊಂದುಕೊಳ್ಳುವುದಿಲ್ಲವೋ?