2 Corinthians 11:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹವ್ವಳು ಸರ್ಪದ ಕುಯುಕ್ತಿಯಿಂದ ಮೋಸಗೊಂಡಂತೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿ ಇರಬೇಕಾದ ಯಥಾರ್ಥತೆಯನ್ನೂ ಪರಿಶುದ್ಧತೆಯನ್ನೂ ಬಿಟ್ಟು ಕೆಟ್ಟುಹೋದೀತೆಂಬ ಭಯ ನನಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.
Kannada BSI Bible 2016
ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಮೋಸಹೋದಳೋ ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಪಾತಿವ್ರತ್ಯವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವುಂಟು.
Kannada Bible (KNCL) BSI 2016
ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿಬಿದ್ದು, ಹೇಗೆ ಮೋಸ ಹೋದಳೋ, ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತ ಯೇಸುವಿನ ಮೇಲಿರಬೇಕಾದ ಯಥಾರ್ಥತೆಯನ್ನೂ ಶುದ್ಧ ಭಕ್ತಿಯನ್ನೂ ಬಿಟ್ಟುಹೋದೀತೆಂಬ ಭಯ ನನಗುಂಟು.