2 Corinthians 11:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಸುಳ್ಳು ಹೇಳುತ್ತಿಲ್ಲವೆಂದು ದೇವರಿಗೆ ಗೊತ್ತಿದೆ. ಆತನು ಪ್ರಭು ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿದ್ದಾನೆ. ಆತನಿಗೆ ಸದಾಕಾಲ ಸ್ತೋತ್ರ ಸಲ್ಲಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಮಾತುಗಳು ಸುಳ್ಳಲ್ಲವೆಂಬುದನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ, ತಂದೆಯೂ ಆಗಿರುವಾತನು ನಿರಂತರ ಸ್ತುತಿ ಹೊಂದತಕ್ಕ ದೇವರೇ ಬಲ್ಲನು.
Kannada BSI Bible 2016
ನಾನು ಸುಳ್ಳಾಡು ವದಿಲ್ಲವೆಂದು ನಮ್ಮ ಕರ್ತನಾದ ಯೇಸುಕ್ರಿಸ್ತನ ತಂದೆಯೂ ನಿರಂತರ ಸ್ತುತಿ ಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಸುಳ್ಳಾಡುವದಿಲ್ಲವೆಂದು ಕರ್ತನಾದ ಯೇಸುವಿನ ತಂದೆಯೂ ನಿರಂತರ ಸ್ತುತಿಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.
Kannada Bible (KNCL) BSI 2016
ನಾನು ಹೇಳುತ್ತಿರುವುದು ಸುಳ್ಳಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರೇ ಇದನ್ನು ಬಲ್ಲರು. ಅವರಿಗೆ ಯುಗಯುಗಾಂತರಕ್ಕೂ ಸ್ತುತಿ ಸಲ್ಲಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಕರ್ತ ಯೇಸುವಿನ ದೇವರೂ ತಂದೆಯೂ ನಾನು ಸುಳ್ಳು ಹೇಳುವುದಿಲ್ಲ ಎಂಬುದನ್ನು ಬಲ್ಲವರಾಗಿದ್ದಾರೆ. ಅವರಿಗೇ ನಿತ್ಯವೂ ಸ್ತುತಿ ಸಲ್ಲಲಿ.