2 Corinthians 11:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನನ್ನ ಕೆಲವು ಸ್ನೇಹಿತರು ನನ್ನನ್ನು ಬುಟ್ಟಿಯೊಳಗೆ ಕುಳ್ಳಿರಿಸಿ, ಗೋಡೆಯ ಕಿಟಕಿಯೊಳಗಿಂದ ಕೆಳಗಿಳಿಸಿದರು. ಹೀಗೆ ನಾನು ರಾಜ್ಯಪಾಲನಿಂದ ತಪ್ಪಿಸಿಕೊಂಡೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನನ್ನನ್ನು ಒಂದು ಬುಟ್ಟಿಯಲ್ಲಿ ಕುಳ್ಳಿರಿಸಿ ಗೋಡೆಯಲ್ಲಿದ್ದ ಒಂದು ಕಿಟಕಿಯಿಂದ ಇಳಿಸಿಬಿಟ್ಟರು. ಹೀಗೆ ಅವನ ಕೈಯಿಂದ ತಪ್ಪಿಸಿಕೊಂಡು ಓಡಿಹೋದೆನು.
Kannada BSI Bible 2016
ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.
Kannada Bible (KNCL) BSI 2016
ಆದರೆ, ಕೆಲವರು ನನ್ನನ್ನು ಗೂಡೆಯಲ್ಲಿ ಕೂರಿಸಿ ಗೋಡೆಯ ಕಿಂಡಿಯೊಂದರ ಮೂಲಕ ಕೆಳಗಿಳಿಸಿದರು. ಹೀಗೆ ನಾನು ಅವನ ಕೈಯಿಂದ ಪಾರಾದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪಟ್ಟಣದ ಕೋಟೆ ಗೋಡೆಯ ಕಿಟಿಕಿಯೊಳಗಿಂದ ಒಂದು ಬುಟ್ಟಿಯ ಮೂಲಕ ಕೆಳಗಿಳಿಸಲಾಗಿ, ಅವನ ಕೈಯೊಳಗಿಂದ ನಾನು ತಪ್ಪಿಸಿಕೊಂಡೆನು.