2 Corinthians 11:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವಿನ ಬಗ್ಗೆ ನಾವು ಬೋಧಿಸಿದ ಸಂಗತಿಗಳಿಗೆ ಭಿನ್ನವಾದಂಥ ಸಂಗತಿಗಳನ್ನು ಬೋಧಿಸುವ ಬೋಧಕರು ನಿಮ್ಮ ಬಳಿಗೆ ಬಂದು ಬೋಧಿಸಿದರೂ ನೀವು ತಾಳ್ಮೆಯಿಂದಿರುತ್ತೀರಿ. ನೀವು ನಮ್ಮಿಂದ ಸ್ವೀಕರಿಸಿಕೊಂಡ ಪವಿತ್ರಾತ್ಮನಿಗೂ ಸುವಾರ್ತೆಗೂ ಭಿನ್ನವಾದ ಆತ್ಮವನ್ನೂ ಸುವಾರ್ತೆಯನ್ನೂ ಸ್ವೀಕರಿಸಿಕೊಳ್ಳಲು ಬಹು ಇಷ್ಟವುಳ್ಳವರಾಗಿದ್ದೀರಿ. ಆದ್ದರಿಂದ ನೀವು ನಮ್ಮ ವಿಷಯದಲ್ಲಿ ತಾಳ್ಮೆಯಿಂದಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ ಯಾರಾದರು ಬಂದು ನಾವು ಬೋಧಿಸಿದ ಯೇಸುವನ್ನಲ್ಲದೆ ಮತ್ತೊಬ್ಬ ಯೇಸುವನ್ನು ನಿಮಗೆ ಪ್ರಕಟಿಸುವಾಗಲೂ ಇಲ್ಲವೇ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ, ನೀವು ಒಪ್ಪಿಕೊಳ್ಳದೆ ಇದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವುದು ಬಹು ಆಶ್ಚರ್ಯ.
Kannada BSI Bible 2016
ಯಾಕಂದರೆ ನಾವು ಸಾರದಿದ್ದ ಬೇರೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವನು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೊಂದು ಆತ್ಮವನ್ನು ಹೊಂದುವಾಗಲೂ ಅಂಗೀಕರಿಸದಿದ್ದ ಬೇರೊಂದು ಸುವಾರ್ತೆಯನ್ನು ಸ್ವೀಕರಿಸುವಾಗಲೂ ನೀವು ಚೆನ್ನಾಗಿ ಸಹಿಸಿಕೊಳ್ಳು ತ್ತಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ನಾವು ಪ್ರಸಿದ್ಧಿಪಡಿಸದಿದ್ದ ಮತ್ತೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವರು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ ಅವಲಂಬಿಸದೆಯಿದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವದು ಬಹು ಆಶ್ಚರ್ಯ.
Kannada Bible (KNCL) BSI 2016
ಏಕೆಂದರೆ, ಯಾರಾದರೂ ಬಂದು, ನಾವು ಬೋಧಿಸದೆ ಇರುವ ಬೇರೊಬ್ಬ ಯೇಸುವನ್ನು ಬೋಧಿಸಿದರೆ ನೀವು ಸ್ವೀಕರಿಸುತ್ತೀರಿ. ನೀವು ಹೊಂದಿರುವ ಪವಿತ್ರಾತ್ಮರಿಗೆ ಬದಲಾಗಿ ಬೇರೊಬ್ಬ ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನಿಮಗೆ ಈಗಾಗಲೇ ದೊರಕಿರುವ ಶುಭಸಂದೇಶವಲ್ಲದೆ ಬೇರೊಂದು ಸಂದೇಶವನ್ನು ನಿಮಗೆ ಸಾರಿದರೆ, ನೀವು ಒಮ್ಮೆಗೇ ಒಪ್ಪಿಕೊಳ್ಳುತ್ತೀರಿ. ಇದು ನಿಜಕ್ಕೂ ಆಶ್ಚರ್ಯವೇ ಸರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯಾವನಾದರೂ ನಿಮ್ಮ ಬಳಿಗೆ ಬಂದು ನಾನು ನಿಮಗೆ ಬೋಧಿಸದೆ ಇರುವ ಬೇರೊಬ್ಬ ಯೇಸುವಿನ ವಿಷಯ ಬೋಧಿಸಿದರೆ, ನೀವು ಸ್ವೀಕರಿಸುವಿರಿ. ನೀವು ಹೊಂದಿದ ಆತ್ಮನ ಬದಲಿಗೆ ಬೇರೊಂದು ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನೀವು ಕೇಳಿರುವ ಸುವಾರ್ತೆಯ ಬದಲು ಬೇರೊಂದು ಸುವಾರ್ತೆಯನ್ನು ಯಾರಾದರೂ ಬೋಧಿಸಿದರೆ, ನೀವು ಬೇಗನೇ ಒಪ್ಪಿಕೊಳ್ಳುತ್ತೀರಿ.