2 Corinthians 11:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿಮಗೆ ದೇವರ ಸುವಾರ್ತೆಯನ್ನು ಉಚಿತವಾಗಿ ಬೋಧಿಸಿದೆನು. ನಿಮ್ಮನ್ನು ಪ್ರಮುಖರನ್ನಾಗಿ ಮಾಡಲು ನನ್ನನ್ನು ತಗ್ಗಿಸಿಕೊಂಡೆನು. ಅದು ತಪ್ಪೆಂದು ಭಾವಿಸುತ್ತೀರೋ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಅಭಿವೃದ್ಧಿಹೊಂದಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದರಲ್ಲಿ ಪಾಪಮಾಡಿದ್ದೇನೋ?
Kannada BSI Bible 2016
ನೀವು ಹೆಚ್ಚಿಸಲ್ಪಡಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದ್ದು ಅಪರಾಧವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಏನು, ನೀವು ಅಭಿವೃದ್ಧಿಹೊಂದಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತಾರ್ಥವಾಗಿ ಸಾರಿದ್ದು ಪಾಪಕೃತ್ಯವೋ?
Kannada Bible (KNCL) BSI 2016
ನಿಮಗೆ ದೇವರ ಶುಭಸಂದೇಶವನ್ನು ಉಚಿತವಾಗಿಯೇ ಬೋಧಿಸಿದೆನು. ನಿಮ್ಮನ್ನು ಮೇಲಕ್ಕೇರಿಸಲು ನನ್ನನ್ನೇ ತಗ್ಗಸಿಕೊಂಡೆನು. ಹೀಗೆ ಮಾಡಿದ್ದು ತಪ್ಪಾಯಿತೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿಫಲವನ್ನು ಎದುರುನೋಡದೇ, ದೇವರ ಸುವಾರ್ತೆಯನ್ನು ನೀವು ಉನ್ನತರಾಗಬೇಕೆಂದು, ನನ್ನನ್ನು ನಾನೇ ತಗ್ಗಿಸಿಕೊಂಡು ಉಚಿತವಾಗಿ ಸಾರಿದ್ದು ನನ್ನ ಪಾಪವೋ?