2 Corinthians 11:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮ್ಮಲ್ಲಿದ್ದಾಗ ನನ್ನ ಯಾವ ಕೊರತೆಯಲ್ಲಿಯೂ ನಿಮಗೆ ತೊಂದರೆ ಕೊಡಲಿಲ್ಲ. ಮಕೆದೋನಿಯದಿಂದ ಬಂದಿದ್ದ ಸಹೋದರರು ನನಗೆ ಬೇಕಾಗಿದ್ದದ್ದನ್ನೆಲ್ಲ ಕೊಟ್ಟರು. ನಾನು ನಿಮಗೆ ಯಾವ ರೀತಿಯಲ್ಲಿಯೂ ಭಾರವಾಗದಂತೆ ನೋಡಿಕೊಂಡೆನು. ಇನ್ನು ಮುಂದೆಯೂ ನಾನು ನಿಮಗೆ ಭಾರವಾಗಿರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ. ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವುದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು. ಇನ್ನು ಮೇಲೆಯೂ ನೋಡಿಕೊಳ್ಳುವೆನು.
Kannada BSI Bible 2016
ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ; ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
Kannada Bible (KNCL) BSI 2016
ನಾನು ನಿಮ್ಮೊಂದಿಗಿದ್ದಾಗ ನನಗೆ ಹಣದ ಕೊರತೆ ಇದ್ದರೂ ನಿಮ್ಮಲ್ಲಿ ಯಾರಿಗೂ ಹೊರೆಯಾಗಲಿಲ್ಲ. ಮಕೆದೋನಿಯದಿಂದ ಬಂದ ಸಹೋದರರು ನನ್ನ ಕೊರತೆಯನ್ನೆಲ್ಲಾ ನೀಗಿಸಿದರು. ನಿಮಗೆ ಯಾವುದರಲ್ಲೂ ಹೊರೆಯಾಗಬಾರದೆಂದು ಎಚ್ಚರಿಕೆ ವಹಿಸಿದ್ದೆ; ಇನ್ನು ಮುಂದಕ್ಕೂ ಎಚ್ಚರಿಕೆಯಿಂದ ಇರುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮಲ್ಲಿದ್ದಾಗ, ನನಗೆ ಕೊರತೆಯಾದಾಗ, ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಏಕೆಂದರೆ, ಮಕೆದೋನ್ಯದಿಂದ ಬಂದಿದ್ದ ಸಹೋದರರು ನನ್ನ ಅವಶ್ಯಕತೆಯನ್ನು ಪೂರೈಸಿದರು. ಹೀಗೆ ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಇನ್ನು ಮುಂದೆಯೂ ಭಾರವಾಗಿರುವುದಿಲ್ಲ.