2 Corinthians 12:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ನನಗೆ ಅವಶ್ಯವಾಗಿದೆ. ಆದ್ದರಿಂದ ನನಗೆ ಪ್ರಭುವಿನಿಂದಾದ ದರ್ಶನಗಳ ಮತ್ತು ಪ್ರಕಟಣೆಗಳ ಬಗ್ಗೆ ಹೇಳುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳುವುದು ನನಗೆ ಅನಿವಾರ್ಯವಾಗಿದೆ. ಆದ್ದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳನ್ನೂ ಮತ್ತು ತಿಳಿಯಪಡಿಸಿದ ರಹಸ್ಯಗಳನ್ನೂ ಕುರಿತು ಹೇಳುತ್ತೇನೆ.
Kannada BSI Bible 2016
ಹೆಚ್ಚಳಪಡುವದು ಹೇಗೂ ವಿಹಿತವಲ್ಲ ದಿದ್ದರೂ ಅದು ನನಗೆ ಅವಶ್ಯವಾಗಿದೆ; ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳ ಮತ್ತು ಪ್ರಕಟನೆಗಳ ವಿಷಯವಾಗಿ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊಗಳಿಕೊಳ್ಳುವದು ವಿಹಿತವಲ್ಲದಿದ್ದರೂ ಅದು ನನಗೆ ಅವಶ್ಯವಾಗಿದೆ. ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳನ್ನು ಕುರಿತೂ ತಿಳಿಯಪಡಿಸಿದ ರಹಸ್ಯಗಳನ್ನು ಕುರಿತೂ ಹೇಳುತ್ತೇನೆ.
Kannada Bible (KNCL) BSI 2016
ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳಬೇಕಾದ್ದು ಅನಿವಾರ್ಯವಾಗಿದೆ. ಆದುದರಿಂದ ಪ್ರಭು ನನಗಿತ್ತ ದರ್ಶನಗಳನ್ನು ಮತ್ತು ಶ್ರುತಪಡಿಸಿದ ಸತ್ಯಗಳನ್ನು ಕುರಿತು ಹೇಳುತ್ತೇನೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಹೊಗಳಿಕೆಯಲ್ಲಿ ಪ್ರಯೋಜನವಿಲ್ಲದಿದ್ದರೂ ಅದು ಅವಶ್ಯವಾಗಿದೆ. ನಾನು ಈಗ ಕರ್ತ ಯೇಸುವಿನಿಂದ ಹೊಂದಿದ ದರ್ಶನಗಳನ್ನು ಮತ್ತು ಪ್ರಕಟನೆಗಳನ್ನು ಕುರಿತು ಹೇಳುತ್ತೇನೆ.