2 Corinthians 12:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನನ್ನಲ್ಲಿ ಬಲಹೀನತೆಗಳಿರುವಾಗ, ಜನರು ನನ್ನ ಬಗ್ಗೆ ಕೆಟ್ಟಸಂಗತಿಗಳನ್ನು ಹೇಳುವಾಗ, ಜನರು ನನ್ನನ್ನು ಹಿಂಸಿಸುವಾಗ, ನನಗೆ ಸಮಸ್ಯೆಗಳಿರುವಾಗ ಸಂತೋಷಿಸುತ್ತೇನೆ. ಇವುಗಳೆಲ್ಲಾ ಕ್ರಿಸ್ತನಿಗೋಸ್ಕರವಾಗಿಯೆ. ಇವುಗಳ ಬಗ್ಗೆ ಸಂತೋಷಪಡುತ್ತೇನೆ, ಏಕೆಂದರೆ ಬಲಹೀನನಾಗಿರುವಾಗಲೇ ನಿಜವಾಗಿಯೂ ಶಕ್ತಿಶಾಲಿಯಾಗಿರುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.
Kannada BSI Bible 2016
ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಕ್ರಿಸ್ತನ ನಿವಿುತ್ತ ನನಗೆ ನಿರ್ಬಲಾವಸ್ಥೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಸಂತುಷ್ಟನಾಗಿದ್ದೇನೆ. ನಾನು ಯಾವಾಗ ನಿರ್ಬಲನಾಗಿದ್ದೇನೋ ಆವಾಗಲೇ ಬಲವುಳ್ಳವನಾಗಿದ್ದೇನೆ.
Kannada Bible (KNCL) BSI 2016
ದುರ್ಬಲತೆಗಳಲ್ಲೂ ದುರವಸ್ಥೆಗಳಲ್ಲೂ ಮಾನನಷ್ಟದಲ್ಲೂ ಕಷ್ಟಹಿಂಸೆಗಳಲ್ಲೂ, ಆಪತ್ತುವಿಪತ್ತುಗಳಲ್ಲೂ ನಾನು ಕ್ರಿಸ್ತಯೇಸುವಿನ ನಿಮಿತ್ತ ಸಂತುಷ್ಟನಾಗಿದ್ದೇನೆ. ನಾನು ಬಲಶಾಲಿಯಾಗಿರುವುದು ಬಲಹೀನನಾಗಿರುವಾಗಲೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ಕ್ರಿಸ್ತ ಯೇಸುವಿನ ನಿಮಿತ್ತ ನನಗೆ ಬಲಹೀನತೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಹರ್ಷಿಸುತ್ತೇನೆ. ಏಕೆಂದರೆ, ಬಲಹೀನತೆಯಲ್ಲಿಯೇ ನಾನು ಶಕ್ತನಾಗಿರುವೆನು.