2 Corinthians 12:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗ ನಿಮ್ಮನ್ನು ಮೂರನೆ ಸಲ ಸಂದರ್ಶಿಸಲು ಸಿದ್ಧನಾಗಿದ್ದೇನೆ, ಆದರೆ ನಾನು ನಿಮಗೆ ಭಾರವಾಗಿರುವುದಿಲ್ಲ. ನಿಮ್ಮ ಸ್ವತ್ತುಗಳಲ್ಲಿ ಯಾವುದೂ ನನಗೆ ಬೇಕಾಗಿಲ್ಲ. ನನಗೆ ಬೇಕಾಗಿರುವುದು ನೀವೇ. ಮಕ್ಕಳು ತಂದೆತಾಯಿಗಳಿಗೋಸ್ಕರ ಹಣವನ್ನು ಉಳಿಸಿ ಕೊಡಬೇಕಾಗಿಲ್ಲ. ತಂದೆತಾಯಿಗಳು ಹಣವನ್ನು ಉಳಿಸಿ ಮಕ್ಕಳಿಗೆ ಕೊಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ ನಾನು ನಿಮ್ಮ ಬಳಿಗೆ ಮೂರನೇ ಸಾರಿ ಬರುವುದಕ್ಕೆ ಸಿದ್ಧವಾಗಿದ್ದೇನೆ ಮತ್ತು ನಿಮಗೆ ಭಾರವಾಗಿರುವುದಿಲ್ಲ. ನಾನು ನಿಮ್ಮ ಸೊತ್ತನ್ನು ಬಯಸದೇ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ಕೂಡಿಸಿಡುವುದು ಧರ್ಮವಲ್ಲ. ಆದರೆ ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವುದೇ ಧರ್ಮ.
Kannada BSI Bible 2016
ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ನಾನು ನಿಮಗೆ ಭಾರವಾಗಿ ರುವದಿಲ್ಲ; ನಾನು ನಿಮ್ಮ ಸೊತ್ತನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಯಾಕಂದರೆ ಮಕ್ಕಳು ತಂದೆತಾಯಿ ಗಳಿಗೋಸ್ಕರ ಆಸ್ತಿಯನ್ನು ಕೂಡಿಸಿಡುವದು ತಕ್ಕದ್ದಲ್ಲ, ತಂದೆತಾಯಿಗಳು ಮಕ
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ಮತ್ತು ನಿಮಗೆ ಭಾರವಾಗಿರುವದಿಲ್ಲ; ನಾನು ನಿಮ್ಮ ಸೊತ್ತನ್ನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ದ್ರವ್ಯವನ್ನು ಕೂಡಿಸಿಡುವದು ಧರ್ಮವಲ್ಲ, ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವದೇ ಧರ್ಮ.
Kannada Bible (KNCL) BSI 2016
ಇಗೋ ಮೂರನೆಯ ಬಾರಿಗೆ ನಾನು ನಿಮ್ಮ ಬಳಿಗೆ ಬರಲು ಸಿದ್ಧನಿದ್ದೇನೆ. ಈ ಸಾರಿಯೂ ನಾನು ನಿಮಗೆ ಹೊರೆಯಾಗಿರಲಾರೆ. ನನಗೆ ಬೇಕಾದವರು ನೀವೇ ಹೊರತು ನಿಮ್ಮ ಹಣಕಾಸು ಅಲ್ಲ. ಮಕ್ಕಳು ಹೆತ್ತವರಿಗಾಗಿ ಅಲ್ಲ, ಹೆತ್ತವರು ಮಕ್ಕಳಿಗಾಗಿ ಆಸ್ತಿಪಾಸ್ತಿಯನ್ನು ಕೂಡಿಡುವುದು ನ್ಯಾಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ನಾನು ನಿಮ್ಮ ಬಳಿಗೆ ಬರುವುದಕ್ಕೆ ಸಿದ್ದನಾಗಿರುವುದು ಇದು ಮೂರನೆಯ ಸಾರಿ. ನಾನು ಬಂದಾಗ ನಿಮಗೆ ಭಾರವಾಗಲು ಬಿಡುವುದಿಲ್ಲ. ನಾನು ನಿಮ್ಮ ಸೊತ್ತನ್ನು ಆಶಿಸುವುದಿಲ್ಲ. ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ನಿಕ್ಷೇಪವನ್ನು ಕೂಡಿಸಿಡುವುದಿಲ್ಲ. ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುತ್ತಾರಷ್ಟೇ.