2 Corinthians 12:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನನ್ನಲ್ಲಿರುವುದನ್ನೆಲ್ಲಾ ನಿಮಗೆ ಕೊಡಲು ಸಂತೋಷಿಸುತ್ತೇನೆ. ನನ್ನನ್ನೇ ನಿಮಗೆ ಕೊಟ್ಟುಬಿಡುತ್ತೇನೆ. ನಾನು ನಿಮ್ಮನ್ನು ಬಹಳವಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನಂತೂ ನನಗಿರುವುದನ್ನು ನಿಮ್ಮ ಆತ್ಮ ಸಂರಕ್ಷಣೆಗೋಸ್ಕರ ಅತಿ ಸಂತೋಷದಿಂದ ವೆಚ್ಚ ಮಾಡುತ್ತೇನೆ; ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತಿರೋ?
Kannada BSI Bible 2016
ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಂತೂ ನನಗಿರುವದನ್ನು ನಿಮ್ಮ ಆತ್ಮಸಂರಕ್ಷಣೆಗೋಸ್ಕರ ಅತಿಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರೋ?
Kannada Bible (KNCL) BSI 2016
ಅಂತೆಯೇ ನಿಮ್ಮ ಆತ್ಮಕ್ಷೇಮಕ್ಕಾಗಿ ನನಗಿರುವುದೆಲ್ಲವನ್ನೂ ಸಂತೋಷದಿಂದ ವ್ಯಯಮಾಡುತ್ತೇನೆ. ನನ್ನನ್ನೇ ಸವೆಸಲು ಸಿದ್ಧನಾಗಿದ್ದೇನೆ. ಇಷ್ಟರಮಟ್ಟಿಗೆ ನಿಮ್ಮನ್ನು ನಾನು ಪ್ರೀತಿಸುವಾಗ ನಿಮ್ಮ ಪ್ರೀತಿ ಕಡಿಮೆಯಾಗುವುದು ಸರಿಯೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನಂತೂ ನನಗಿರುವುದೆಲ್ಲವನ್ನೂ ನಿಮ್ಮ ಆತ್ಮಗಳಿಗೋಸ್ಕರ ಬಹು ಸಂತೋಷದಿಂದ ವೆಚ್ಚಮಾಡುತ್ತೇನೆ. ನನ್ನನ್ನು ಕೂಡ ನಿಮಗೋಸ್ಕರ ವೆಚ್ಚಮಾಡಲು ಸಿದ್ಧನಾಗಿದ್ದೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ?