2 Corinthians 12:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈವರೆಗೂ ನಾವು ನಿಮ್ಮೊಂದಿಗೆ ನಮ್ಮ ಬಗ್ಗೆ ಸಮರ್ಥಿಸಿಕೊಳ್ಳುತ್ತಿದ್ದೇವೆಂದು ಭಾವಿಸುತ್ತೀರೋ? ಇಲ್ಲ! ನಾವು ಕ್ರಿಸ್ತನಲ್ಲಿ ಈ ಸಂಗತಿಗಳನ್ನು ದೇವರ ಮುಂದೆ ಹೇಳುತ್ತಿದ್ದೇವೆ. ನೀವು ನಮ್ಮ ಪ್ರಿಯ ಸ್ನೇಹಿತರು. ನಾವು ಮಾಡುವ ಪ್ರತಿಯೊಂದೂ ನಿಮ್ಮನ್ನು ಮತ್ತಷ್ಟು ಬಲಿಷ್ಠರನ್ನಾಗಿ ಮಾಡುವುದಕ್ಕಾಗಿಯೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುತ್ತಿರುವವರೆಂದು ಭಾವಿಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ, ನಾವು ಕ್ರಿಸ್ತನಲ್ಲಿದ್ದು ನಿಮ್ಮ ಭಕ್ತಿವೃದ್ಧಿಗೋಸ್ಕರವೇ ಮಾತನಾಡುವವರಾಗಿದ್ದೇವೆ.
Kannada BSI Bible 2016
ನಾವು ತಪ್ಪಿಲ್ಲದವರೆಂದು ನಿಮಗೆ ಹೇಳುತ್ತೇ ವೆಂದು ನೆನಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತನಾಡುವವರಾಗಿದ್ದೇವೆ. ಅತಿ ಪ್ರಿಯರೇ, ನಾವು ಮಾಡುವದನ್ನೆಲ್ಲಾ ನಿಮ್ಮ ಭಕ್ತಿವೃದ್ದಿಗೋಸ್ಕರವೇ ಮಾಡುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುವವರೆಂದು ನೆನಸುತ್ತೀರೋ? ನಿಮ್ಮ ಮುಂದೆಯಲ್ಲ, ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತಾಡುವವರಾಗಿದ್ದೇವೆ. ಪ್ರಿಯರೇ, ನಾವು ಮಾತಾಡುವದೆಲ್ಲಾ ನಿಮ್ಮ ಭಕ್ತಿವೃದ್ಧಿಗೋಸ್ಕರವೇ ಆಗಿದೆ.
Kannada Bible (KNCL) BSI 2016
ನಾವು ತಪ್ಪಿತಸ್ಥರಲ್ಲವೆಂದು ನಿಮ್ಮ ಮುಂದೆ ಸಮರ್ಥಿಸಿಕೊಳ್ಳುವುದಕ್ಕಾಗಿ ಇದನ್ನು ಹೇಳುತ್ತಿದ್ದೇವೆಂದು ನೆನಸಬೇಡಿ. ದೇವರ ಸನ್ನಿಧಿಯಲ್ಲಿ, ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾನು ನಿಮಗೆ ಹೇಳುತ್ತೇನೆ: ಪ್ರಿಯ ಸಹೋದರರೇ, ನಾವು ಮಾಡುತ್ತಿರುವುದೆಲ್ಲ ನಿಮ್ಮ ಆಧ್ಯಾತ್ಮಿಕ ಅಭಿವೃದ್ಧಿಗಾಗಿಯೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುತ್ತಿದ್ದೇವೆಂದು ನೆನಸುತ್ತೀರೋ? ಹಾಗೆ ಅಲ್ಲ; ಪ್ರಿಯರೇ, ನಾವು ಮಾಡುವುದೆಲ್ಲವೂ ನಿಮ್ಮ ಭಕ್ತಿವೃದ್ಧಿಗಾಗಿ ದೇವರ ದೃಷ್ಟಿಯಲ್ಲಿ ಕ್ರಿಸ್ತ ಯೇಸುವಿನಲ್ಲಿ ಇರುವವರಂತೆ ಮಾತನಾಡುವವರಾಗಿದ್ದೇವೆ.